ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಆದೇಶ ಮೇರಿ ಒಂದರಿಂದ ಐದನೇ ತರಗತಿ ಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನದನ್ವಯ ಆರನೇ ತರಗತಿ ಮತ್ತು ಮೇಲ್ಪಟ್ಟ ತರಗತಿಗಳನ್ನು ಮಾತ್ರ ಆರಂಭಿಸಲು ಅನುಮತಿ ನೀಡಲಾಗಿದೆ.
ಆದರೆ, ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು ಒಂದರಿಂದ ಐದನೇ ತರಗತಿ ಯನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಇಂಥವ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಒಂದರಿಂದ ಐದನೇ ತರಗತಿವರೆಗೆ ಅನಧಿಕೃತವಾಗಿ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡವನ್ನು ರಚಿಸಿ ರಕ್ಷಿಸಬೇಕು ಎಂದು ಇಲಾಖೆ ಆಯುಕ್ತರು ತಮ್ಮ ಹೆಚ್ಚುವರಿ ಆಯುಕ್ತರುಗಳಿಗೆ ಸೂಚಿಸಿದ್ದಾರೆ.