CrimeNEWSನಮ್ಮಜಿಲ್ಲೆ

ಕಲಬುರಗಿ: ಬೆಳ್ಳಂಬೆಳಗ್ಗೆ ಪೊಲೀಸ್ ಕಾನ್ಸ್ಟೇಬಲ್ ಪುತ್ರನ ಬರ್ಬರ ಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಪುತ್ರನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ವಿದ್ಯಾನಗರ ನಿವಾಸಿ ಚಂದ್ರಕಾಂತ ಎಂಬುವರ ಮಗ 27 ವರ್ಷದ ಅಭಿಷೇಕ್ ಎಂಬಾತನೇ ಕೊಲೆಯಾದ ಯುವಕ. ಚಂದ್ರಕಾಂತ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದಾರೆ.

ಅಭಿಷೇಕ್ ಎಂದಿನಂತೆ ಗುರುವಾರ ಕೂಡ ಜಿಮ್‌ಗೆ ಹೋಗುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ಬಂದಿದ್ದಾನೆ. ಈ ವೇಳೆ ಏಳೆಂಟು ಜನರಿದ್ದ ದುಷ್ಕರ್ಮಿಗಳ ತಂಡ ಆತನನ್ನು ಬೆನ್ನಟ್ಟಿದೆ.

ಮುಖ್ಯರಸ್ತೆಯಿಂದಲೇ ದುಷ್ಕರ್ಮಿಗಳು ಬೆನ್ನಟ್ಟಿದ್ದರಿಂದ ಬಸ್ ನಿಲ್ದಾಣದೊಳಗೆ ಅಭಿಷೇಕ್ ಓಡಿ ಬಂದಿದ್ದಾನೆ. ಆದರೂ ಸಹ ಬಿಡದೆ ದುಷ್ಕರ್ಮಿಗಳು ಬಸ್ ನಿಲ್ದಾಣದ ಆವರಣದಲ್ಲೇ ಸಾರ್ವಜನಿಕ ಎದುರೇ ಮರಕಾಸ್ತ್ರಗಳಿಂದ ಅಭಿಷೇಕ್ ಮೇಲೆ ದಾಳಿ ಮಾಡಿದ್ದಾರೆ. ಮನಸೋ ಇಚ್ಛೆ ಕೊಚ್ಚಿ, ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಈ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಭೀಕರ ದೃಶ್ಯ ಕಂಡ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ನಗರ ಉಪ ಪೊಲೀಸ್ ಆಯುಕ್ತ ಎ.ಶ್ರೀನಿವಾಸಲು, ಇನ್ಸ್ಪೆಕ್ಟರ್ ಪಂಡಿತ ಸಗರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ