CrimeNEWSನಮ್ಮಜಿಲ್ಲೆ

ಕಾರಾಗೃಹದ ನಿವಾಸಿಗಳಿಗೆ ಸಾಕ್ಷರತೆ ಅಗತ್ಯ : ನ್ಯಾ.ದೇಶಪಾಂಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಅಕ್ಷರ ಜ್ಞಾನ, ತಿಳುವಳಿಕೆ ಇಲ್ಲದವರು ತಿಳಿದು, ತಿಳಿಯದೇ ತಪ್ಪು ಮಾಡಿ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಅಂತಹವರಿಗೆ ಸಾಕ್ಷರತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದೇಶಪಾಂಡೆ ಜಿ.ಎಸ್ ಹೇಳಿದರು.

ನವನಗರದ ಜಿಲ್ಲಾ ಕಾರಾಗೃಹದಲ್ಲಿಂದು ಲೋಕಶಿಕ್ಷಣ ನಿದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಸಹಯೋಗದಲ್ಲಿ ಕಲಿಕೆಯಿಂದ ಬದಲಾವಣೆ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡ ಜಿಲ್ಲಾ ಕಾರಾಗೃಹ ನಿವಾಸಿಗಳಿಗೆ ಸಾಕ್ಷರತಾ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.

ಅಕ್ಷರ ಜ್ಞಾನ ಇಲ್ಲದವರಿಗೆ ಇದು ಸರಿ, ತಪ್ಪು ಎಂಬ ಕಲ್ಪನೆ ಮಾಡಿಕೊಳ್ಳಲು ಅರಿವು ಇರುವದಿಲ್ಲ. ಅನಕ್ಷರತೆಯಿಂದ ಅಪರಾಧಗಳು ಹೆಚ್ಚಾಗಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಅಂತಹವರಿಗೆ ಕಾರಾಗೃಹದಲ್ಲಿಯೇ ಸಾಕ್ಷರತೆ ನೀಡಿದಲ್ಲಿ ಕಾರಾಗೃಹದಿಂದ ಬಿಡುಗಡೆ ಹೊಂದಿದ ನಂತರ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಇದರ ಸದುಪಯೋಗ ಕಾರಾಗೃಹದ ಸಿಬ್ಬಂದಿಗಳು ಪಡೆದುಕೊಳ್ಳಲು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ದೈನಂದಿನ ವ್ಯವಹಾರಕ್ಕೆ ಸಾಕ್ಷರತೆ ಅಗತ್ಯವಾಗಿದೆ. ಕಲಿಕೆಯಿಂದ ಸಮಾಜದಲ್ಲಿ ತಪ್ಪು, ಸರಿ ಯಾವುದು ಎಂಬುದರ ಬಗ್ಗೆ ತಿಳಿಯಲು ಸಾಧ್ಯ. ಇದರ ಜೊತೆಗೆ ಅವರ ಆರ್ಥಿಕವಾಗಿ ಮುಂದೆಬರಲು ಸಾಧ್ಯವಾಗುತ್ತದೆ. ಸರಕಾರ ಇಂತಹ ಅತ್ಯುತ್ಮ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಪ್ರಾರಂಭದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎನ್.ಬಿ.ಗೊರವರ ಅವರು ರಾಜ್ಯಾದ್ಯಂತ ಸಾಕ್ಷರತೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ 50 ಕಾರಾಗೃಹಗಳಲ್ಲಿ ಏಕಕಾಲದಲ್ಲಿ ಒಂದೇ ದಿನ ಸಾಕ್ಷರತಾ ಕಾರ್ಯಕ್ರಮಗಳಿಗೆ ನವೆಂಬರ 1 ರಂದು ಚಾಲನೆ ನೀಡಲಾಗುತ್ತಿದೆ. ಕಾರಾಗೃಹದಲ್ಲಿರುವ ಅನಕ್ಷರಸ್ಥರಿಗೆ ಕಲಿಕೆ ಅಗತ್ಯತೆಯನ್ನು ಮನಗಂಡು ಸರಕಾರ ಕಾರ್ಯಕ್ರಮ ಹಾಕಿಕೊಂಡಿದೆ ಎಂದರು.

ಸಾಕ್ಷರತಾ ಕಾರ್ಯಕ್ರಮದ ಮೂಲಕ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡಿ ಇಲಾಖೆಯಿಂದ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದರಿಂದ ಮುಂದಿನ ಕಲಿಕೆಗೆ ಹಾಗೂ ವಿವಿಧ ವೃತ್ತಿಪರ ತರಬೇತಿ ಪಡೆಯಲು ಅನುಕೂಲವಾಗಲಿದೆ.

2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 5.80 ಲಕ್ಷ ಅನಕ್ಷರಸ್ಥರಿದ್ದು, ಅದರಲ್ಲಿ 3 ಲಕ್ಷ ಜನರನ್ನು ಸಾಕ್ಷರರನ್ನಾಗಿ ಮಾಡಲಾಗಿದೆ. ಉಳಿದವರನ್ನು ಸಾಕ್ಷರರನ್ನಾಗಿ ಮಾಡಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾಕ್ಷರತಾ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಡಿಡಿಪಿಐ ಎಸ್.ಎಸ್.ಬಿರಾದಾರ, ಆರ್‍ಎಂಎಸ್‍ನ ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ, ಜಿಲ್ಲಾ ಕಾರಾಗೃಹದ ಅಧೀಕ್ಷಕ ಡಿ.ಆರ್.ಮೇದಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ