ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಕಾರ್ಯಕರ್ತರ ಸಭೆ
ಪಿರಿಯಾಪಟ್ಟಣ : ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಮತದಾರರನ್ನು ನೋಂದಾಯಿಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಧು ಜಿ.ಮಾದೇಗೌಡ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಜಿ ಶಾಸಕ ಕೆ.ವೆಂಕಟೇಶ್ ಸಮ್ಮುಖದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಮಾತನಾಡಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯೂ ಸನಿಹವಾಗುತ್ತಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ನಾನು ಆಕಾಂಕ್ಷಿಯಾಗಿದ್ದೇನೆ. ನಮ್ಮ ಪಕ್ಷದಲ್ಲಿಯೆ ಕೆಲವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ. ಆದರೆ ಅಂತಿಮವಾಗಿ ಪಕ್ಷ ಯಾರಿಗೆ ಸೂಚನೆ ನೀಡುತ್ತದೆಯೋ ಅವರು ಸ್ಪರ್ಧಿಸುತ್ತಾರೆ ಎಂದರು.
ಈ ಬಾರಿ ಮತದಾರರ ನೋಂದಣಿ ಪ್ರಮುಖವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರ ಮತದಾರರನ್ನು ನೋಂದಣಿ ಮಾಡಿಸುವ ಮತ್ತು ಈ ಹಿಂದೆ ಮತದಾನದಲ್ಲಿ ಶೇಕಡ 45 ರಷ್ಟು ಮಾತ್ರ ಮತದಾನವಾಗಿದ್ದು ಸಂಪೂರ್ಣ ಮತದಾನವಾಗುಂತೆ ಮಾಡಬೇಕು. ಈ ಮೂಲಕ ಕಾಂಗ್ರೆಸ್ ಪಕ್ಷದ ವ್ಯಕ್ತಿಯ ಗೆಲುವಿಗೆ ಸಹಕಾರ ನೀಡಬೇಕು ಎಂದರು.
ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ದಕ್ಷಿಣ ಪದವೀಧರರ ಚುನಾವಣೆಗಳಲ್ಲಿ ಮೊದಲು ಪಕ್ಷ ನೇರವಾಗಿ ಭಾಗವಹಿಸುತ್ತಿರಲಿಲ್ಲ ಆದರೆ ಈ ಬಾರಿ ನೇರವಾಗಿ ಪಕ್ಷವೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಕೆಲಸ ಮಾಡಲು ನಿರ್ಧಾರ ಮಾಡಿದೆ.
ಈ ಬಾರಿ ಮಧು ಜಿ.ಮಾದೇಗೌಡರೊಂದಿಗೆ ಮತ್ತೊಬ್ಬರು ಡಾ.ರವಿ ಎಂಬ ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಅವಕಾಶ ನೀಡಿದರು ಅವರ ಪರವಾಗಿ ಕೆಲಸ ನಿರ್ವಹಿಸಬೇಕು ಅದಕ್ಕಾಗಿ ಮತದಾರರ ನೋಂದಣಿಯ ಬಗ್ಗೆ ಯೂತ್‌ಕಾಂಗ್ರೆಸ್ ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕೆಲಸ ನಿರ್ವಹಿಸಬೇಕು ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್‌ಜಾನ್‌ಬಾಬು, ಮಹಿಳಾ ಘಟಕದ ಅಧ್ಯಕ್ಷೆ ಮುತ್ತುರಾಣಿ, ಪುರಸಭೆ ಸದಸ್ಯರಾದ ಹರ್ಷದ್,ಚಾಮರಾಜು,ರವಿ, ಮಾಜಿ ಸದಸ್ಯ ಎಂ.ಸುರೇಶ್, ಎಸ್ಸಿಘಟಕದ ಅಧ್ಯಕ್ಷ ಪಿ.ಮಹದೇವ್, ಗ್ರಾ.ಪಂ.ಸದಸ್ಯ ಪದ್ಮಲತಾ, ಯೂತ್‌ಕಾಂಗ್ರೆಸ್ ಅಧ್ಯಕ್ಷರಾದ ರಘುಹಬಟೂರು, ಹರೀಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಜೆ.ಮೋಹನ್, ಮುರಳೀಧರ್ ಮತ್ತಿತರರು ಇದ್ದರು.