ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಸಾಮಾಜಿಕ ಕ್ರಾಂತಿಯ ಮೂಲಕ ಅಸಮಾನತೆಯ ವಿರುದ್ಧ 12ನೇ ಶತಮಾನದಲ್ಲಿ ಹೋರಾಡಿದ ವಚನಕಾರರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಶುಕ್ರವಾರ ಮಿನಿ ವಿಧಾನಸೌಧದ ತಹಸೀಲ್ದಾರ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.
ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರಳವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು.
ತಹಸೀಲ್ದಾರ್ ಡಿ.ನಾಗೇಶ್ ಮಾತನಾಡಿ, ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ತಾಲೂಕಿನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಬರುತ್ತಿರುವುದು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಜನರು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿದ್ದಲ್ಲಿ ಕೊರೊನಾ ರೋಗಕ್ಕೆ ಕಡಿವಾಣ ಹಾಕಬಹುದು ಎಂದು ತಿಳಿಸಿದರು.
ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಜಿ.ಕೃಷ್ಣಪ್ಪ, ಎಎಸ್ ಐ ಸಿದ್ದಯ್ಯ, ಮುಖ್ಯಾಧಿಕಾರಿ ಅಶೋಕ, ಶಿರಸ್ತೇದಾರ್ ಕೃಷ್ಣಮೂರ್ತಿ, ಪ್ರಭುರಾಜ್, ಮುಖಂಡ ಸಿ.ಬಿ.ಹುಂಡಿ ಪ್ರಕಾಶ್ ಇನ್ನಿತರರು ಇದ್ದರು.