ಸಾರಿಗೆ ನೌಕರರ ಸರ್ವ ಸಂಘಟನೆಗಳ ಸಭೆ ಯಶಸ್ವಿ: ಸಂಘಟನೆಗಳ ಜಂಟಿ ಸಮಿತಿ ಅಸ್ತಿತ್ವಕ್ಕೆ
ಬೆಂಗಳೂರು: ಸಾರಿಗೆ ಸರ್ವ ಸಂಘಟನೆಗಳ ಮುಖಂಡರನ್ನು ಒಗ್ಗೂಡಿಸಲು ಕೂಟದ ಪದಾಧಿಕಾರಿಗಳು ಇಂದು ನಡೆಸಿದ ಸರ್ವ ಸಂಗಟನೆಗಳ ಸಭೆಯಲ್ಲಿ “ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಗಳ ಜಂಟಿ ಸಮಿತಿ” ರಚಿಸಿ ಎಲ್ಲರೂ ಒಗ್ಗಟ್ಟಾಗಿರಲು ಎಲ್ಲ ಸಂಘಟನೆಗಳ ಮುಖಂಡರು ಒಕ್ಕೂರಲಿನ ನಿರ್ಧಾರ ತೆಗೆದುಕೊಂಡಿದ್ದಾರೆ.
ಕಳೆದ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿದ್ದು ಈವರೆಗೂ ಅವುಗಳನ್ನು ವಾಪಸ್ ಪಡೆಯದೆ ಇರುವುದರಿಂದ ನೌಕರರು ಸಮಸ್ಯೆಗೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಪೂರ್ಣಿಮಾ ಟಾಕೀಸ್ ಮುಂಭಾಗದ ಜೈ ಬೀಮ್ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸರ್ವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಅದರಲ್ಲಿ ಎಐಟಿಯುಸಿ ಸಂಘಟನೆ ಬಿಟ್ಟು ಸಿಐಟಿಯು, ಕೆಬಿಎನ್, ಯುನಿಟೆಡ್ ಎಂಪ್ಲಾಯ್‌ಯೂನಿಯನ್, ಕೆಎಸ್‌ಆರ್‌ಟಿಸಿ ಯುನಿಟೆಡ್ ಎಂಪ್ಲಾಯ್‌ಯೂನಿಯನ್, ಮಹಾಮಂಡಲ, ಬಿಎಂಎಸ್, ಮುಸ್ಲಿಂ ಸಂಘಟನೆ, ಕನ್ನಡ ಸಮನ್ವಯ ಸಂಘ, ಬಿಎಂಟಿಸಿ ಒಕ್ಕಲಿಗ ಸಂಘ ಸೇರಿದಂತೆ ಸಾರಿಗೆಯ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಈ ಸಭೆಯಲ್ಲಿ ಪ್ರಮುಖವಾಗಿ ಮುಷ್ಕರದ ವೇಳೆ ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸುವ ಕುರಿತ ಸುಮಾರು ನಾಲ್ಕು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು.
ವಜಾ, ವರ್ಗಾವಣೆ, ಅಮಾನತು ಆದ ನೌಕರರ ಬಗ್ಗೆ ಹಾಗೂ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ನೀಡದಿರುವುದು, ಘಟಕಗಳಲ್ಲಿ ಕಿರುಕುಳ ಕೊಡುತ್ತಿರುವುದನ್ನು ಸರಿಪಡಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಮುಂದಿನ ಹೋರಾಟಕ್ಕೆ ಕೈ ಜೋಡಿಸಬೇಕು ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಹೀಗಾಗಿ ಈ ಎಲ್ಲ ಸಾರಿಗೆ ನೌಕರರ ಪರವಾದ ಸಂಘಟನೆಗಳು ಇಂದು ಕೈ ಜೋಡಿಸಿದ್ದು, ನೌಕರರು ಅನುಭವಿಸುತ್ತಿರುವ ಸಮಸ್ಯೆಗಳು ಅತೀ ಶೀಘ್ರದಲ್ಲೇ ದೂರವಾಗುವ ಎಲ್ಲ ಬೆಳವಣಿಗಳು ಗೋಚರಿಸುತ್ತಿವೆ. ಈ ಬೆಳವಣಿಗೆಯನ್ನು ನೌಕರರು ಸ್ವಾಗತಿಸುವ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಮುಂದೆ “ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಗಳ ಜಂಟಿ ಸಮಿತಿ” ಯಲ್ಲಿ ಏನು ನಿರ್ಧಾರ ತೆಗೆದುಕೊಳ್ಳಲಾಗುತ್ತದೆಯೋ ಆ ನಿಟ್ಟಿನಲ್ಲಿ ಪ್ರತಿಯೊಂದು ಸಂಘಟನೆಯ ಪದಾಧಿಕಾರಿಗಳು ನಡೆದುಕೊಳ್ಳಬೇಕು. ಜತೆಗೆ ನೌಕರರ ದಿಕ್ಕು ತಪ್ಪಿಸುವಂತ ಮಾಹಿತಿಗಳನ್ನು ನೀಡಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
ಸಾರಿಗೆ ಸಂಸ್ಥೆಯಲ್ಲಿರುವ ಬಹುತೇಕ ಎಲ್ಲ ಸಂಘಟನೆಗಳು ಒಗ್ಗೂಡಿದ್ದು, ಮುಂದಿನ ದಿನಗಳಲ್ಲಿ ನೌಕರರರಿಗೆ ಆಗಿರುವ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವತ್ತ ಯಾವ ರೀತಿ ಹೋರಾಟದ ರೂಪುರೇಷೆ ರಚಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ಮಾಡಲಾಗಿದೆ.
ಇನ್ನು ಪ್ರಮುಖವಾಗಿ ಡಿ.13ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನ ಎಲ್ಲಿ ನಡೆಯುತ್ತದೆಯೋ (ಬೆಳಗಾವಿ ಅಥವಾ ಬೆಂಗಳೂರು) ಅಲ್ಲಿ ಅರ್ನಿದಿಷ್ಟಾವಧಿ ಮುಷ್ಕರ ಕೂರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಸಭೆಯಲ್ಲಿ ಸರ್ವ ಸಂಘಟನೆಗಳ ಮುಖಂಡರೂ ಸದ್ಯಕ್ಕೆ ಈಗ ಬಳ್ಳಾರಿಯಿಂದ – ಬೆಂಗಳೂರಿಗೆ ನೌಕರರು ಏನು ನ.29ರಿಂದ ಪಾದಯಾತ್ರೆ ನಡೆಸುತ್ತಿದ್ದಾರೋ ಆ ಪಾದಯಾತ್ರೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಸಾಥ್ ನೀಡುವ ಮೂಲಕ ತುಮಕೂರಿನಿಂದ ಬೆಂಗಳೂರಿನವರೆಗೂ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಬೇಕು. ಜತೆಗೆ ಹಲವಾರು ಕನ್ನಡ ಪರ ಸಂಘಟನೆಗಳ ಪ್ರಮುಖರು ಭಾಗಿಯಾಗುವಂತೆ ಆಹ್ವಾನಿಸುವ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇನ್ನು ಪಾದಯಾತ್ರೆ ಮಾದವರಕ್ಕೆ ಬರುತ್ತಿದ್ದಂತೆ ಎಐಟಿಯುಸಿಯ ಪದಾಧಿಕಾರಿಗಳು ಸೇರಿಕೊಳ್ಳುವ ಮೂಲಕ ಅವರೂ ನೌಕರರಿಗೆ ಬೆಂಬಲ ಸೂಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಭೆಯಲ್ಲಿ ಸಿಐಟಿಯು ಉಪಾಧ್ಯಕ್ಷ ಡಾ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕೂಟದ ಅಧ್ಯಕ್ಷ ಚಂದ್ರು, ಉಪಾಧ್ಯಕ್ಷ ಸುಧಾಕರ್ ರೆಡ್ಡಿ ಸೇರಿದಂತೆ ವಿವಿಧ ಸಂಘಟನೆಗಳ 150ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು.
Related
You Might Also Like
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...