NEWSನಮ್ಮಜಿಲ್ಲೆನಮ್ಮರಾಜ್ಯ

10ನೇ ದಿನಕ್ಕೆ ಸಾರಿಗೆ ನೌಕರರ ಪಾದಯಾತ್ರೆ: ಬಿಎಂಟಿಸಿ 13 ನೇ ಘಟಕದ ಚಾಲಕ ಮಲ್ಲೇಶಪ್ಪರಿಂದ ಉಪಾಹಾರ ವ್ಯವಸ್ಥೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ವಾಭಿಮಾನಿ ಸಾರಿಗೆ ನೌಕರರ ಪಾದಯಾತ್ರೆ 10ನೇ ದಿನವಾದ (ಡಿ.8) ಇಂದು ಜಾಲಕ್ರಾಸ್‌ನಲ್ಲಿರುವ ಬಸವೇಶ್ವರ ಬಸ್‌ನಿಲ್ದಾನದಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಸಾಗುತ್ತಿದ್ದು, ಇದಕ್ಕೂ ಮುನ್ನ ಕತ್ತರಿಗುಪ್ಪಿ ಬಿಎಂಟಿಸಿ 13 ನೇ ಘಟಕದ ಚಾಲಕ ಮಲ್ಲೇಶಪ್ಪ ಮತ್ತು ಕುಟುಂಬದವರು ಪಾದಯಾತ್ರೆ ನಿರತರಿಗೆ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಿದ್ದರು.

ಪಾದಯಾತ್ರೆಗೆ ಬಹುತೇಕ ಎಲ್ಲ ನೌಕರರ ಸಂಘಟನೆಗಳ ಪಾಧಿಕಾರಿಗಳ ಜತೆಗೆ ಕನ್ನಡಪರ ವಿವಿಧ ಸಂಘಟನೆಗಳು ಭಾಗವಹಿಸಿವೆ.

ಇನ್ನು ಮಂಗಳವಾರ ರಾತ್ರಿಜಾಲಹಳ್ಳಿ ಕ್ರಾಸ್‌ ಬಸವೇಶ್ವರ ಬಸ್‌ ನಿಲ್ದಾಣದಲ್ಲಿ ವಾಸ್ತವ್ಯ ಮಾಡಿ ಬುಧವಾರ ಬೆಳಗ್ಗೆ ಉಪಹಾರ ಸೇವಿಸಿದ ಬಳಿಕ ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ಫ್ರೀಡಂ ಪಾರ್ಕ್‌ ತಲುಪಲಿದ್ದು, ಅಲ್ಲಿ ಸಂಜೆ 5ಗಂಟೆವರೆಗೆ ಸಾಂಕೇತಿಕ ಧರಣಿ ನಡೆಸಿ ಬಳಿಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿ ಅವರಿಗೆ ಮನವ ಪತ್ರ ಸಲ್ಲಿಸುವ ಮೂಲಕ ಪಾದಯಾತ್ರೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಅವರಲ್ಲಿ ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್‌ ಕೇಸ್‌ಗಳನ್ನು ವಾಪಸ್‌ ಪಡೆಯುವಂತೆ ಮನವಿ ಮಾಡಲಾಗುವುದು ಎಂದು ನೌಕರರು ತಿಳಿಸಿದ್ದಾರೆ.

ನ.29ರಿಂದ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಿಂದ ವಿಧಾನಸೌಧದ ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಸಾರಿಗೆಯ ನಾಲ್ಕೂ ನಿಗಮಗಳ ನೂರಾರು ನೌಕರರು, ಕನ್ನಡಪರ ಸಂಘನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.

ಪಾದಯಾತ್ರೆ ಬಳ್ಳಾರಿ ಕೇಂದ್ರ ಬಸ್‌ನಿಲ್ದಾಣದಿಂದ ಆರಂಭವಾಗಿ- ಹಾನಗಹಲ್‌- ಚಳ್ಳಕೆರೆ – ಹಿರಿಯೂರು ಬೈಪಾಸ್‌ – ತುಮಕೂರು – ದಾಬಸ್‌ಪೇಟೆ – ನೆಲಮಂಗಲ – ಯಶವಂತಪುರ – ಮೇಖ್ರಿ ವೃತ್ತ – ಪ್ಯಾಲೇಸ್‌ಗುಟ್ಟಹಳ್ಳಿ- ಜಾಲಹಳ್ಳಿ ಕ್ರಾಸ್‌ ವರೆಗೂ ಇಲ್ಲಿಯವರೆಗೂ ಸಾಗಿದ್ದು ಇಂದು ಫ್ರೀಡಂ ಪಾರ್ಕ್‌ ತಲುಪಲಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?