ಬೆಂಗಳೂರು: ರಾಜ್ಯದ ನಾಲ್ಕೂ ನಿಗಮಗಳ ಸಾರಿಗೆ ಸಂಸ್ಥೆಗಳ ನೌಕರರು ಮತ್ತೆ ಮುಷ್ಕರ ಮಾಡಲು ಮುಂದಾಗಿದ್ದಾರೆ ಎಂಬ ಸುಳಿವು ಸರ್ಕಾರಕ್ಕೆ ಸಿಕ್ಕಿದೆ. ಇದನ್ನು ಅರಿತ ಸರ್ಕಾರ ಮುಷ್ಕರಕ್ಕೆ ನಿರ್ಧರಿಸಿದ್ದ ಸಾರಿಗೆ ಸಿಬ್ಬಂದಿಗೆ ಬ್ರೇಕ್ ಹಾಕಲು ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.
ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳಲ್ಲಿಯೂ ನಮ್ಮ ಬೇಡಿಕೆ ಈಡೇರಿಸಲು ಇನ್ನೂ ಮೀನಾಮೇಷ ಎಣಿಸಲಾಗುತ್ತಿವೆ ಎಂದು ಬರುವ ಜುಲೈ 5ರ ಬಳಿಕ ಸಾರಿಗೆ ನೌಕರರು ಮತ್ತೆ ರಸ್ತೆಗೆ ಇಳಿಯಲಿದ್ದಾರೆ ಎನ್ನಲಾಗಿದೆ. ಇದನ್ನು ತಿಳಿದ ಸರ್ಕಾರ ನೌಕರರಿಗೆ ಕಡಿವಾಣ ಹಾಕಲು ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.
ಈ ವರ್ಷ ಸಾರಿಗೆ ಮುಷ್ಕರ ನಡೆಸುವಂತಿಲ್ಲ
ರಾಜ್ಯದ ಸರ್ಕಾರದ ಆರ್ಥಿಕತೆಯ ಮೇಲೆ ಕೋವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ. ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು (essential services maintain act) ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜುಲೈ 1ರಿಂದ ಡಿಸೆಂಬರ್ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರ ಮಾಡದಂತೆ ನಿಷೇಧ ಹೇರಲಾಗಿದೆ.
ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗುತ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು. ಲಾಕ್ಡೌನ್ ಮುಗಿದ ಮೇಲೆ ಜುಲೈ 5 ರ ನಂತರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಸರ್ಕಾರ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.