NEWSನಮ್ಮಜಿಲ್ಲೆನಮ್ಮರಾಜ್ಯ

224 ಶಾಸಕರ ಮನೆ ಮುಂದೆ ಸಾರಿಗೆ ನೌಕರರ ಧರಣಿ: ಮುಷ್ಕರಕ್ಕೆ ಹಲವು ಶಾಸಕರ ಸಾಥ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರ 10ನೇ ದಿನವೂ ಮುಂದುವರಿದಿದ್ದು, ಇಂದು ರಾಜ್ಯದ 224 ಶಾಸಕರ ಮನೆ ಮುಂದೆ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸುವ ಚಳವಳಿ ಬೆಳಗ್ಗೆ 8ಗಂಟೆಯಿಂದಲೇ ಶುರುವಾಗಿ ಮಧ್ಯಾಹ್ನದ ವರೆಗೆ ನಡೆಯಿತು.


ಬ್ಯಾಡಗಿ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರಿಗೆ ಸಾರಿಗೆ ನೌಕರರು ಮನವಿ ಸಲ್ಲಿಸಿದರು.

ಈ ವೇಳೆ ಹಲವು ಶಾಕರಿಗೆ ಸಾರಿಗೆ ನೌಕರರು ಮನವಿ ಸಲ್ಲಿಸುವ ಮೂಲಕ ಸರ್ಕಾರವೇ ಭರವಸೆ ಕೊಟ್ಟಿರುವ 6ನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ನಮ್ಮ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಸಹಕರಿಸುವ ಮೂಲಕ ನಮ್ಮನ್ನು ಬೆಂಬಲಿಸಿ ಎಂದು ಕೇಳಿಕೊಂಡರು.

ಮುಷ್ಕರದ 6ನೇ ದಿನದಂದು ತಟ್ಟೆ ಲೋಟ ಬಡಿಯುವ ಚಳವಳಿ ಮಾಡಿದ್ದರು. ಈ ವೇಳೆ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆ ಮಾಡಿದ್ದರು. ಮುಷ್ಕರದ 7ನೇ ದಿನವಾದ ಚಂದ್ರಮಾನ ಯುಗಾದಿಯ ದಿನದಂದು ತಟ್ಟಿ ಹಿಡಿದು ಭಿಕ್ಷೆ ಬೇಡುವ ಚಳವಳಿ ಮಾಡಲಾಯಿತು.


ಮಾಗಡಿ ಶಾಸಕರಾದ ಎ. ಮಂಜು ಅವರಿಗೆ ಸಾರಿಗೆ ನೌಕರರಿಂದ ಮನವಿಪತ್ರ ಸಲ್ಲಿಸಲಾಯಿತು.

ಮುಷ್ಕರದ 8ನೇ ದಿನದಂದು ಅಂದರೆ ಏ.14ರಂದು ಅಂಬೇಡ್ಕರ್‌ ಪುತ್ಥಳಿ, ಪ್ರತಿಮೆ ಮತ್ತು ಫೋಟೋಗಳಿಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ವಿನೂತನ ಚಳವಳಿ ನಡೆಸಿದ್ದು, ನಿನ್ನೆ ಅಂದರೆ ಮುಷ್ಕರದ 9ನೇ ದಿನದಂದು ಮೇಣದ ಬತ್ತಿ ಹಚ್ಚುವ ಮೂಲಕ ನಮ್ಮ ಬದುಕನ್ನು ಕತ್ತಲೆಗೆ ದೂಡುತ್ತಿರುವ ಸರ್ಕಾರ ಮತ್ತು ಸಾರಿಗೆ ಸಚಿವರು ಮತ್ತು ಅಧಿಕಾರಿಗಳ ಕಣ್ತೆರೆಸುವ ಚಳವಳಿಯನ್ನು ಮಾಡಿ ಯಶಸ್ವಿಯಾಗಿದೆ.


ರಾಣೆಬೆನ್ನೂರು ಕ್ಷೇತ್ರದ ಶಾಸಕ ಅರುಣ್ ಕುಮಾರ್ ಅವರಿಗೆ ಸಾರಿಗೆ ನೌಕರರು ಮನವಿ ಸಲ್ಲಿಸಿದರು.

ಮುಷ್ಕರ 10ನೇ ದಿನವಾದ ಇಂದು ರಾಜ್ಯದ 224 ಶಾಸಕರ ಮನೆ ಮುಂದೆ ಧರಣಿ ನಡೆಸಿ ಮನವಿ ಪತ್ರ ಸಲ್ಲಿಸುವ ಚಳವಳಿ ನಡೆಯುತ್ತಿದ್ದು, ಬಹುತೇಕ ಎಲ್ಲಾ ಶಾಸಕರ ಮನೆಗಳ ಮುಂದೆ ಧರಣಿ ಆರಂಭಿಸಿ ಮನವಿ ಪತ್ರ ಸಲ್ಲಿಸಲಾಗಿದೆ.

ಶಾಸಕರಿಗೆ ಮನವಿ ಪತ್ರ ಸಲ್ಲಿಸಿದ ನೌಕರರ ಮನವಿಯನ್ನು ಸ್ವೀಕರಿಸಿದ ಬಹುತೇಕ ಶಾಸಕರು ನಿಮ್ಮ ಬೇಡಿಕೆ ನ್ಯಾಯಯುತವಾಗಿದ್ದು, ಈಡೇರಿಕೆಗೆ ನಾವು ಕೂಡ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ನೌಕರರು ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ