CrimeNEWSನಮ್ಮಜಿಲ್ಲೆ

ಮಗು ಸೇರಿ ಇಬ್ಬರು ಸಜೀವದಹನ, ದುಷ್ಕರ್ಮಿಗಳಿಂದ ಕೃತ್ಯದ ಶಂಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ಮನೆಯಲ್ಲಿ ಮಲಗಿದ್ದು ನಾಲ್ಕು ವರ್ಷ ಮಗು ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆ ನಾಗಮಂಗಲ ತಾಲೂಕಿನ ಅಗಚಹಳ್ಳಿಲ್ಲಿ ತಡರಾತ್ರಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ದುರ್ಘಟನೆಯಲ್ಲಿ ತನ್ವಿತ್(4), ದೀಪಕ್(33) ಮೃತಪಟ್ಟಿದ್ದಾರೆ. ಮಗುವಿನ ತಂದೆ ಭರತ್ ದೇಹ ಶೇ.90 ರಷ್ಟು ಸುಟ್ಟಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯವರಾದ ಭರತ್ ನಾಗಮಂಗಲದಲ್ಲಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿದ್ದರು. ಕಳೆದ 5ವರ್ಷಗಳ ಹಿಂದೆ ಮದುವೆಯಾಗಿದ್ದ ಭರತ್, ಇತ್ತೀಚೆಗೆ ಪತ್ನಿ ಜೊತೆ ಮುನಿಸಿಕೊಂಡು ದೂರಾಗಿದ್ದರು. ಬಳಿಕ ತನ್ನ ಮಗ ತನ್ವಿತ್ ಜೊತೆ ಬೆಳ್ಳೂರಿನ ಅಗಚಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ರು.

ಈ ನಡುವೆ ತಾನಾಯ್ತು ತನ್ನ ಕೆಲಸವಾಯ್ತು ಅಂತಿದ್ದ ಭರತ್ ಮನೆಗೆ ನಿನ್ನೆ ಆತನ ಸಂಬಂಧಿ ದೀಪಕ್ ಬಂದಿದ್ದಾನೆ. ಸಂಬಂಧಿ ಬಂದ ಖುಷಿಯಲ್ಲಿ ರಾತ್ರಿ ಇಬ್ಬರು ಎಣ್ಣೆ ಪಾರ್ಟಿ ಮುಗಿಸಿದ್ದಾರೆ. ಬಳಿಕ ಎಂದಿನಂತೆ ಪಕ್ಕದ ಮನೆಯವರನ್ನ ಮಾತನಾಡಿಸಿಕೊಂಡು ಭರತ್ ಮಲಗಲು ತೆರಳಿದ್ದಾನೆ.

ಆದರೆ ಬೆಳಗ್ಗಿನ ಜಾವ 3.30ರಲ್ಲಿ ಭರತ್ ಮನೆಯಿಂದ ಜೋರಾದ ಶಬ್ದ ಕೇಳಿಬಂದಿದ್ದು, ಗಾಬರಿಯಿಂದ ಓಡಿಬಂದ ಪಕ್ಕದ ಮನೆಯವರಿಗೆ ಮಗು ಹಾಗೂ ಭರತ್‍ನ ಚೀರಾಟ ಕೇಳಿಬಂದಿದೆ. ಮನೆ ಕಿಟಕಿಯಿಂದ ಹೊಗೆ ಬರುತ್ತಿದ್ದರಿಂದ ಬೆಂಕಿ ತಗುಲಿರುವುದು ಖಚಿತವಾಗಿದೆ.

ತಕ್ಷಣ ಮನೆಮಾಲೀಕ ಮನೆ ಬೀಗ ಒಡೆದು ಒಳನುಗ್ಗಿದ್ದು. ಬೆಂಕಿ ನಂದಿಸಿ ಗಾಯಾಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ತನ್ವಿತ್ ಹಾಗೂ ಸಂಬಂಧಿ ದೀಪಕ್ ಮೃತಪಟ್ಟಿದ್ದಾರೆ. ತಂದೆ ಭರತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡ ಎಂದುಕೊಂಡಿದ್ದ ಪೊಲೀಸರಿಗೆ ಇಂದು ಕೊಲೆ ಇರಬಹುದು ಎಂಬ ಅನುಮಾನ ಮೂಡಿದ್ದು ತನಿಖೆ ಆರಂಭಿಸಿದ್ದಾರೆ.

ಅಕ್ಕ-ಪಕ್ಕದ ಮನೆಯವರ ಹೇಳಿಕೆ ಸಂಗ್ರಹಿಸಿರುವ ಪೊಲೀಸರಿಗೆ, ನಿನ್ನೆ ರಾತ್ರಿ ದೀಪಕ್ ಜೊತೆ ಮತ್ತಿಬ್ಬರು ಭರತ್ ಮನೆಗೆ ಬಂದಿದ್ದ ಮಾಹಿತಿ ದೊರಕಿದೆ. ಎಲ್ಲರೂ ಒಟ್ಟಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ಬರ್ತಿದ್ದ ಪೆಟ್ರೋಲ್ ವಾಸನೆ ಹಾಗೂ ಮನೆಗೆ ಆಚೆಯಿಂದ ಹಾಕಲಾಗಿದ್ದ ಬೀಗ ಪೊಲೀಸರ ಸಂದೇಹ ಮತ್ತಷ್ಟು ಹೆಚ್ಚಿಸಿದ್ದು. ಎಲ್ಲರೂ ನಿದ್ದೆಗೆ ಜಾರಿದ ಬಳಿಕ ಹಂತಕರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ಅವಘಡ ಎಂದುಕೊಂಡಿದ್ದ ಪೊಲೀಸರಿಗೆ ಕೊಲೆಯ ಸುಳಿವು ಸಿಕ್ಕಿದ್ದು, ವಿವಿಧ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...