NEWSನಮ್ಮಜಿಲ್ಲೆಸಂಸ್ಕೃತಿ

31ನೇ ಜಿಲ್ಲೆಯಾಗಿ ವಿಜಯನಗರ : ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ

ವಿಜಯಪಥ ಸಮಗ್ರ ಸುದ್ದಿ

ಹೊಸಪೇಟೆ: ಕರ್ನಾಟಕದ 31ನೇ ಮತ್ತು ನೂತನ ಜಿಲ್ಲೆಯಾಗಿ ಇಂದು (ಅಕ್ಟೋಬರ್ 2) ವಿಜಯನಗರ ಜಿಲ್ಲೆ ಲೋಕಾರ್ಪಣೆಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಜಿಲ್ಲೆಯ ಕೇಂದ್ರ ಸ್ಥಾನವಾದ ಹೊಪೇಟೆಯಲ್ಲಿ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದ್ದಾರೆ.

6 ತಾಲೂಕುಗಳನ್ನು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಈ ಮೂಲಕ ಲೋಕಾರ್ಪಣೆಗೊಂಡಿದ್ದು, ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿ ಕಾರ್ಯಕ್ರಮ ಕೂಟ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಜನಪ್ರತಿನಿಧಿಗಳು, ಮಠಾಧೀಶರು ಭಾಗಿಯಾಗಿದ್ದರು.

ಸಿಎಂ ಬೊಮ್ಮಾಯಿ ವಿಜಯಸ್ತಂಭ ಅನಾವರಣ, ನೂತನ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಇನ್ನು ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರಗಳ ವಿತರಣೆಯನ್ನು ಇದೇ ವೇದಿಕೆಯಲ್ಲಿ ಮಾಡಲಾಗಿದೆ. ನೂತನ ವಿಜಯನಗರ ಜಿಲ್ಲೆಯ ಜಾಲತಾಣ ಉದ್ಘಾಟನೆಯೂ ಕೂಡ ಆಯಿತು.

ವಿಜಯನಗರ ನೂತನ ಜಿಲ್ಲೆ ಮಾಡುವ ಮೂಲಕ ಸಚಿವ ಆನಂದ್​ ಸಿಂಗ್​ ಮತ್ತೊಂದು ಇತಿಹಾಸ ಸೃಷ್ಟಿಸಿದ್ದಾರೆ. ಸಿಂಗ್​ ನೂತನ ಜಿಲ್ಲೆಗೆ ರಾಜಕೀಯ ಜೀವನ ಮುಡಿಪಾಗಿಟ್ಟರು. ನೂತನ ಜಿಲ್ಲೆಯ ರಚನೆಗೆ ಕಾರಣರಾದ ಸಿಂಗ್​ಗೆ ಅಭಿನಂದನೆ ಎಂದು ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದು, ಈ ಮೂಲಕ ಸಚಿವ ಆನಂದ್​ ಸಿಂಗ್​ ಸಂಭ್ರಮ ಪಡುವ ಘಳಿಗೆಯಾಗಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...