ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ನಡೆದ ಅವ್ಯವಹಾರ ಖಂಡಿಸಿ ಮತ್ತು ಸಂಪೂರ್ಣ ತನಿಖೆಗೆ ಆಗ್ರಹಿಸಿ ಗ್ರಾಮಸ್ಥರು ಪಂಚಾಯಿತಿ ಆವರಣದಲ್ಲಿ ಧರಣಿ ನಡೆಸುತ್ತಿದ್ದಾರೆ.
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಎರೆಹುಳು ಘಟಕ ಮಾಡಿಕೊಂಡ ಫಲಾನುಭವಿಗಳಿಗೆ ಹಣ ಪಾವತಿ ಮಾಡುವಂತೆ ಒತ್ತಾಯಿಸಿ ಇಂದು ಸೊನ್ನ ಗ್ರಾಮದ ಗ್ರಾಮಸ್ಥರು ಧರಣಿ ನಡೆಸುತ್ತಿದ್ದು, ಮೇಲಧಿಕಾರಿಗಳು ಬಂದು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಧರಣಿಯಲ್ಲಿ ಸೊನ್ನ ಗ್ರಾಮ ಪ್ರಾಥಮಿಕ ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ವಿಜಯಕುಮಾರ ಬಿರಾದಾರ, ರಮೇಶ ಕೋಳಕೂರ ಬಸವರಾಜ ಹೆಗಡೆ, ಬಸವರಾಜ ಜೇವರ್ಗಿ, ಶಿವಕುಮಾರ ಹೆಗಡೆ, ಸಿದ್ದು ಆಂದೋಲಾ, ಮಡೆಪ್ಪ ಸರನಾಳ, ರವಿಕುಮಾರ ನಾಯಿಕೊಡಿ, ಸಮೀರ ಭಂಟನೂರ, ಭೀಮರಾಯ ನೈಕೋಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.