NEWSನಮ್ಮಜಿಲ್ಲೆನಮ್ಮರಾಜ್ಯ

ನಿಮ್ಮ ಮುಷ್ಕರಕ್ಕೆ ನಾವು ಬಗ್ಗಲ್ಲ: ಹಠಮಾರಿ ಧೋರಣೆ ಮುಂದುವರಿಸಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಇನ್ನೊಂದೆಡೆ ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ನಾಳೆಯಿಂದ (ಏ.7) ವಿವಿಧ ಬೇಡಿಕೆಗಳ ಈಡೇರಿಸುವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಸೆ ತೀರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದರು.

ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಯತ್ನಿಸುತ್ತಿದ್ದು, ಅವರ ಪ್ರಯತ್ನ ವಿಫಲವಾಗಲಿದೆ ಎಂದು ನೌಕರರ ಹೇಳುತ್ತಿದ್ದಾರೆ.

ಮುಷ್ಕರದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಇಂದು  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ನಿಗಮಗಳ ನಾಲ್ವರು ಎಂಡಿಗಳ ತುರ್ತು ಸಭೆ ನಡೆಸಿದರು.

ಇನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿಮ್ಮೊಂದಿಗೆ ಮಾತನಾಡಲು ಸಿದ್ಧವಿಲ್ಲ. ನೀವು ಇಚ್ಛೆ ಇದ್ದರೆ ಕೆಲಸಕ್ಕೆ ಹಾಜರಾಗಿ ಇಲ್ಲ ಮುಷ್ಕರವನ್ನೇ ಮಾಡಿ ಎಂಬ ಕಡಕ್‌ ಸಂದೇಶವನ್ನು ರವಾನಿಸಿದೆ.

ಸರ್ಕಾರಕ್ಕೆ ಪ್ರತಿಯಾಗಿ ನೌಕರರು ಕೂಡ ತಿರುಗೇಟು ನೀಡಿದ್ದು, ನಾವು ಅರೆಹೊಟ್ಟೆಯಲ್ಲಿ ಇನ್ನಷ್ಟು ದಿನ ದುಡಿದು ನಿಮ್ಮ ಹೊಟ್ಟೆ ತುಂಬಿಸುವುದಕ್ಕೆ ನಾವು ಸಿದ್ಧರಿಲ್ಲ ನಮಗೂ ಕುಟುಂವಬವಿದೆ ಅವರನ್ನು ಇನ್ನು ಮುಂದೆ ಅರೆಹೊಟ್ಟೆಯಲ್ಲಿ ನೋಡಲು ಸಮಗೂ ಸಾಧ್ಯವಿಲ್ಲ. ಹೀಗಾಗಿ ನೀವು ನಿಮ್ಮ ಹಠಮಾರಿತನ ಬಿಡದಿದ್ದರೆ ನಾವು ನಿಮಗೆ ಮುಂದಿನ ದಿನಗಳಲ್ಲಿ ಬುದ್ಧಿಕಲಿಸದೆ ಬಿಡೆವೂ ಎಂಬ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ಒಟ್ಟಾರೆ ನಾಳೆಯಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ್‌ ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ