Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ವೈಟ್ ಟಾಪಿಂಗ್ ಕಾಮಗಾರಿ ಶೀಘ್ರ ಮುಗಿಸಿ: ಅಧಿಕಾರಿಗಳಿಗೆ ಗೌರವ್ ಗುಪ್ತ ತಾಕೀತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಸಂಜಯ್‌ನಗರದ 80 ಅಡಿ ರಸ್ತೆಯಲ್ಲಿ ಅಶ್ವಥ್ ನಗರದ ದ್ವಾರದಿಂದ ಎಂ.ಎಸ್ .ರಾಮಯ್ಯ ಆಸ್ಪತ್ತೆಯ ರಸ್ತೆಯ ಸ್ನಿಗಲ್ ವರೆಗೆ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ತಾಕೀತು ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಾಲಿಕೆಯ ಯೋಜನಾ ವಿಭಾಗದಿಂದ ಸಂಜಯ್‌ನಗರದ 80 ಅಡಿ ರಸ್ತೆಯು ಸುಮಾರು 1 ಕಿ.ಮೀ ಇದ್ದು, 9.82 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ಮೇ ಅಂತ್ಯದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಂಡು 30 ದಿನಗಳಲ್ಲಿ ಎರಡೂ ಬದಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಈ ಪೈಕಿ ಒಂದು ಬದಿಯಲ್ಲಿ ಕ್ಯೂರಿಂಗ್ ಆಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಮತ್ತೊಂದು ಬದಿ ಕ್ಯೂರಿಂಗ್ ಬಾಕಿಯಿದೆ.

ಇನ್ನು ರಸ್ತೆಯ ಎರಡೂ ಬದಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ನೀರಿನ ಪೈಪ್ ಲೈನ್, ಬೆಸ್ಕಾಂ, ಒಎಫ್‌ಸಿ ಕೇಬಲ್‌ಗಳಿಗೆ ಡಕ್ಟ್ಸ್ ಅಳವಡಿಕೆ, ಚರಂಡಿ ಕಾಮಗಾರಿ, ಪಾದಚಾರಿ ಮಾರ್ಗ ಸೇರಿದಂತೆ ಇನ್ನಿತರ ಸಿವಿಲ್ ಕಾಮಗಾರಿ ಬಾಕಿಯಿದ್ದು, 35 ರಿಂದ 40 ದಿನಗಳಲ್ಲಿ ಉಳಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನಿಡಿದರು.

ಕ್ಯೂರಿಂಗ್ ಆದ ಕೂಡಲೆ ಎರಡೂ ಕಡೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ, ಜತೆಗೆ ಬಾಕಿಯಿರುವ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ತ್ವರಿತವಾಗಿ ಪೂರ್ಣಗೊಳಿಸಲು ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ