NEWSನಮ್ಮರಾಜ್ಯರಾಜಕೀಯ

ಸಿಬಿಐ ದಾಳಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಸಮನ್ಸ್‌ ಜಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿನ್ನೆ ನಡೆದ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಸಮನ್ಸ್‌ ಜಾರಿಯಾಗಿದೆ.

ಸೋಮವಾರ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್‌ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ‌ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ ಡಿಕೆಶಿ ಇನ್ನೆರಡು ದಿನದಲ್ಲಿ ಸಿಬಿಐ ವಿಚಾರಣೆ ಎದುರಿಸಲಿದ್ದಾರೆ.

ನಿನ್ನೆ ಬೆಳಗ್ಗೆಯಿಂದ ಸಾಯಂಕಾಲದವರೆಗೆ ನಡೆದ ಸಿಬಿಐ ದಾಳಿ ಮತ್ತು ಶೋಧದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿವಕುಮಾರ್, ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಒಂದೇ ಒಂದು ಮಾತಾಡದ ರಾಜ್ಯ ಬಿಜೆಪಿ ಸರ್ಕಾರ ತನ್ನ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕಿಡಿಕಾರಿದ್ದಾರೆ.

2017, ಗುಜರಾತ್‌ನಲ್ಲಿ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲೂ ಇದೇ ಮನೆ ಮೇಲೆ ಐಟಿ ದಾಳಿ ನಡೆದಿತ್ತು. 2019ರಲ್ಲಿ ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ಕೇಸ್ ದಾಖಲಿಸಿ ಕೇಸ್​ ಹಾಕಿ ಜೈಲಿಗೆ ಕಳಿಸಿತು. 48 ದಿನಗಳು ನಾನು ತಿಹಾರ್ ಜೈಲಿನಲ್ಲಿದ್ದೆ. ಆಗ ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಸೇರಿ ಪಕ್ಷಗಳ ಮುಖಂಡರು ನನ್ನ ಬೆಂಬಲಕ್ಕೆ ನಿಂತರು ಮತ್ತು ನನಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಿದರು,’’ ಎಂದು ಹಿಂದೆ ನಡೆದ ದಾಳಿಯ ಬಗ್ಗೆಯೂ ಹೇಳಿದರು.

ಅಂದು ನಮ್ಮ ಜನ ತೋರಿಸಿದ ಪ್ರೀತಿಯನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ಎಷ್ಟೋ ಮಠಮಾನ್ಯಗಳು, ಧಾರ್ಮಿಕ ಮುಖಂಡರು ನನ್ನಲ್ಲಿ ಶಕ್ತಿಯನ್ನು ತುಂಬಿದರು. ತಿಹಾರ್ ಜೈಲಿನಿಂದ ಹೊರ ಬಂದಾಗಲೂ ರಾಷ್ಟ್ರ, ರಾಜ್ಯದ ಮುಖಂಡರು, ಕಾರ್ಯಕರ್ತರ ಬೆಂಬಲ ನನಗೆ ಸಿಕ್ಕಿತು. ಕೆಲವರು ಜೈಲಿಂದ ಹೊರಬಂದವನಿಗೆ ಮೆರವಣಿಗೆ ಬೇಕಿತ್ತಾ ಎಂದರು. ಅದೇ ಪರಪ್ಪನ ಅಗ್ರಹಾರದಿಂದ ಬಂದವರು ಯಾವ ಶೈಲಿಯಲ್ಲಿ ಹೊರಬಂದರೆಂದು ಜನ ನೋಡಿದ್ದಾರೆ. ನಾನು ಅವರಂತೆ ವಿಕ್ಟರಿ ಸಿಂಬಲ್ ತೋರಿಸಿಕೊಂಡು ಬರಲಿಲ್ಲ. ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ. ಅದಾದ ಬಳಿಕ ನನ್ನನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮಾಡಲಾಯಿತು ಎಂದು ಹೇಳಿದರು.

ಇನ್ನು ಸಿಬಿಐ ದಾಳಿಗೆ ಅನುಮತಿ ಕೊಟ್ಟಿರುವುದು ರಾಜ್ಯದ ಮುಖ್ಯಮಂತ್ರಿಗಳು, ಅಡ್ವೊಕೇಟ್ ಜನರಲ್ ಹೇಳಿದರೂ ಒಪ್ಪದೆ ಅನುಮತಿ ನೀಡಿದ್ದಾರೆ. ನನ್ನ ನಿವಾಸ, ಕಚೇರಿಗಳ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ. ಉತ್ತರ ಪ್ರದೇಶದ ಘಟನೆ ಬಗ್ಗೆ ತುಟಿ ಬಿಚ್ಚದ ಇವರು, ಚುನಾವಣೆ ವೇಳೆ ಗಮನ ಬೇರೆಡೆ ಸೆಳೆಯಲು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದರು.

ಸಿಬಿಐನವರು ಯಾವಾಗ ಕರೆದರೂ ವಿಚಾರಣೆಗೆ ಹಾಜರಾಗುತ್ತೇನೆ. ಅವರು ತನಿಖೆ ಮುಂದುವರಿಸಲಿ, ನನಗೆ ಯಾವ ಪ್ರಶ್ನೆಯನ್ನಾದರೂ ಕೇಳಲಿ, ಸಮರ್ಥವಾದ ಉತ್ತರ ನೀಡುತ್ತೇನೆ, ಕದ್ದು ಓಡಿ ಹೋಗುವ ಜಾಯಮಾನ ನನ್ನದಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು