NEWSದೇಶ-ವಿದೇಶರಾಜಕೀಯ

ಜ.20ರಂದು ವಾಷಿಂಗ್ಟನ್ ತೊರೆಯಲಿದ್ದಾರೆ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ವಾಷಿಂಗ್ಟನ್: ನೂತನ ಅಧ್ಯಕ್ಷ ಜೊ ಬೈಡನ್ ಅವರು ಅಧಿಕಾರ ವಹಿಸಿಕೊಳ್ಳುವುದಕ್ಕೆ ಕೆಲವೆ ನಿಮಿಷಗಳು ಇರುವಂತೆಯೇ  ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಬುಧವಾರ (ಜ.20) ಬೆಳಗ್ಗೆ ವಾಷಿಂಗ್ಟನ್ ತೊರೆಯಲಿದ್ದಾರೆ ಎಂದು ತಿಳಿದು ಬಂದಿದೆ.

ನಿರ್ಗಮನ  ಸಮಾರಂಭ ನಡೆಯಲಿದರುವ ಜಾಯಿಂಟ್ ಬೇಸ್ ಆಂಡ್ರ್ಯೂಸ್ ನಲ್ಲಿ  ಅವರನ್ನು ಗೌರವಪೂರ್ವಕವಾಗಿ ಕಳುಹಿಸಿಕೊಡಲಾಗುವುದು ಎಂದು ಹೆಸರು ಹೇಳಲಿಚ್ಛಿಸದ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಟ್ರಂಪ್ ಅವರ ಯೋಜನೆಗಳೇನು ಎಂದು ಇನ್ನೂ ಘೋಷಣೆಯಾಗಿಲ್ಲ.

ಈ ಬಾರಿಯ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುತ್ತಾ ಬಂದಿರುವ ಡೊನಾಲ್ಡ್ ಟ್ರಂಪ್ ನಾಡಿದ್ದು ಜೊ ಬೈಡನ್ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರಲು ನಿರ್ಧರಿಸಿದ್ದಾರೆ. ಅವರ ಸ್ಥಾನದಲ್ಲಿ ಉಪಾಧ್ಯಕ್ಷ ಮೈಕ್ ಪೆನ್ಸ್ ಭಾಗವಹಿಸಲಿದ್ದಾರೆ.

ಈ ನಡುವೆ ವಾಷಿಂಗ್ಟನ್ ನಲ್ಲಿ ಸರ್ಕಾರಿ ಅಧಿಕಾರಿಗಳು ರೆಡ್ ಕಾರ್ಪೆಟ್ ಮೂಲಕ ವೈಭವೋಪೇತ ಸಮಾರಂಭ ಏರ್ಪಡಿಸಿ ಮಿಲಿಟರಿ ಬ್ಯಾಂಡ್ ನೊಂದಿಗೆ 21 ಸುತ್ತು ಬಂದೂಕು ವಂದನೆ ಸಲ್ಲಿಸಿ ಡೊನಾಲ್ಡ್ ಟ್ರಂಪ್ ಅವರಿಗೆ ಬೀಳ್ಕೊಡಲು   ಸಿದ್ಧತೆ ನಡೆಯುತ್ತಿದೆ.

ತಮ್ಮಮುಂದಿನ ದಿನಗಳನ್ನು  ಟ್ರಂಪ್ ಅವರು ತಮ್ಮ ಒಡನಾಟ ಹೊಂದಿರುವ ಗುಂಪಿನ ಸಹಚರರೊಂದಿಗೆ ಫ್ಲೋರಿಡಾದಲ್ಲಿ ಕಳೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

1 Comment

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ