NEWSನಮ್ಮರಾಜ್ಯರಾಜಕೀಯ

ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ : ಸಿಎಂ ಬಿಎಸ್‌ವೈ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ನಾಳೆ ಮಾಡುತ್ತಿರುವ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡಪರ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಬನಶಂಕರಿಯಲ್ಲಿರುವ ಸತ್ತೂರು ಸದನದಲ್ಲಿ ಭೇಟಿ ಮಾಡಿ ಶ್ರೀಗಳ ಆಶೀರ್ವಚನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅಗತ್ಯ ಇಲ್ಲ. ಎಲ್ಲ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ನೀವು ಬಂದ್‌ ಮಾಡಿದರೆ ಜನರಿಗೆ ತೊಂದರೆಯಾಗುತ್ತದೆ ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಹೇಳಿದರು.

ಕನ್ನಡಕ್ಕೆ ಏನೇನು ಮಾಡಿ ಕೊಡಬೇಕೋ, ಕನ್ನಡದ ಮುಖಂಡರು ಏನು ಹೇಳ್ತಾರೋ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ಆದರೆ, ಬಂದ್‌ಗೆ ಎಲ್ಲಿಯೂ ಅವಕಾಶ ಇಲ್ಲ. ಯಾರು ಬಂದ್ ಮಾಡಬೇಡಿ ಎಂದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...