ಬೆಂ. ಗ್ರಾಮಾಂತರ: ವಿದೇಶಗಳಿಂದ ಬರುವ ಹೊರ ಜಿಲ್ಲೆಯ ಜನರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ವಾರಂಟೇನ್ ಮಾಡದಿರಲು ಹಾಗೂ ಜಿಲ್ಲೆಯನ್ನು ಕೆಂಪು ವಲಯದಿಂದ ಬದಲಾಯಿಸುವಂತೆ ಕೋರಿ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಸಕರು, ಜಿಪಂ, ತಾಪಂ ವತಿಯಿಂದ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರಿಗೆ ಮನವಿ ಸಲ್ಲಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಈವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯ ಶಾಸಕರು ಮಾಡಿರುವ ಮನವಿಯ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ಶಾಸಕರು ಮಾತನಾಡಿ, ವಿದೇಶಗಳಿಂದ ಕರ್ನಾಟಕದ ಜನರನ್ನು ಕರೆತರುವ ಸರ್ಕಾರದ ಕ್ರಮ ಪ್ರಶಂಸನೀಯವಾದುದಾಗಿದ್ದು, ಆದರೆ ಗ್ರಾಮಾಂತರ ಜಿಲ್ಲೆಯಲ್ಲಿ ವಿದೇಶದಿಂದ ಬರುವ ಹೊರ ಜಿಲ್ಲೆಯ ಪ್ರಯಾಣಿಕರನ್ನು ಕ್ವಾರಂಟೇನ್ ಮಾಡಬಾರದೆಂದು ತಿಳಿಸಿದರು.
ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ದೇವನಹಳ್ಳಿ ಶಾಸಕ ನಿಸರ್ಗನಾರಾಯಣಸ್ವಾಮಿ, ನೆಲಮಂಗಲ ಶಾಸಕ ಡಾ. ಕೆ.ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು ಇದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail