NEWSಆರೋಗ್ಯನಮ್ಮರಾಜ್ಯ

ಕೊರೊನಾ ಚುಚ್ಚುಮದ್ದು: ಇಂದು 263 ಸ್ಥಳಗಳಲ್ಲಿ ಡ್ರೈ ರನ್ ಪ್ರಾರಂಭ : ಸಚಿವ ಡಾ.ಕೆ.ಸುಧಾಕರ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಜನರನ್ನು ದೂರವಿಡುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶ್ರಮಿಸುತ್ತಿದ್ದು, ಇಂದು 263 ಸ್ಥಳಗಳಲ್ಲಿ ಡ್ರೈ ರನ್ ಪ್ರಾರಂಭ ಆಗಲಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಒಂದು ಖಾಸಗಿ ಆಸ್ಪತ್ರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದು ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಡುತ್ತೇನೆ ಎಂದರು.

ಈಗಾಗಲೇ ಯಾವುದೇ ಲೋಪ, ತಾಂತ್ರಿಕ ಸಮಸ್ಯೆ ಆಗದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದಿನಿಂದ  ಜಾಹೀರಾತು ಸಹ ನೀಡಲಾಗುತ್ತಿದೆ. ಯಾರಾದರೂ ಕೋವಿಡ್ ವಾರಿಯರ್ಸ್‌ಗಳು ದಾಖಲು ಮಾಡಿಲ್ಲ ಅಂದ್ರೆ ರಿಜಿಸ್ಟರ್ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ಇನ್ನು ಯಾವುದೇ ಲಸಿಕೆಗೂ ಮಾಧ್ಯಮ ಕ್ಷೇತ್ರದಿಂದ ಇಷ್ಟೊಂದು ಒತ್ತಡ ಇರಲಿಲ್ಲ. ಕ್ಲಿನಿಕಲ್ ಟ್ರಯಲ್ ಸೇರಿ ಲಸಿಕೆಗೆ ಮೂರು ಹಂತದ ಪರಿಶೀಲನೆ ನಡೆಸಬೇಕಾಗುತ್ತದೆ. ವಿಜ್ಞಾನಿಗಳು, ಸಂಶೋಧಕರ ಮೇಲೆ ನಂಬಿಕೆ ಇಡೋಣ. ಆದಷ್ಟು ಬೇಗ ಲಸಿಕೆ ಎಲ್ಲರಿಗೂ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆಸ್ಟರ್ ಆಸ್ಪತ್ರೆಗೆ ಭೇಟಿ ಬಳಿಕ ಮಾತನಾಡಿದ ಡಾ.ಕೆ ಸುಧಾಕರ್, ನಾಳೆ ಕೇಂದ್ರ ಸರ್ಕಾರದಿಂದ 13 ಲಕ್ಷದ 90 ಸಾವಿರ(13,90,000) ಲಸಿಕೆ ಕರ್ನಾಟಕಕ್ಕೆ ಬರಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದ ತಿಳಿಸುತ್ತೇನೆ.

ನಾವು 263 ಕೇಂದ್ರಗಳಲ್ಲಿ ಡ್ರೈ ರನ್ ಮಾಡುತ್ತಿದ್ದೇವೆ. ಖಾಸಗಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಹೇಗಿದೆ ಎಂದು ನೋಡಿ ಬಳಿಕ ಡ್ರೈ ರನ್ ಮಾಡುತ್ತಿದ್ದೇವೆ. ವೈಜ್ಞಾನಿಕವಾಗಿ ತುಂಬಾ ಚೆನ್ನಾಗಿ, ಅಚ್ಚುಕಟ್ಟಾಗಿ ಮಾಡಿದ್ದಾರೆ. ನಾನು ಇದೀಗ ಚಿಕ್ಕಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲೂ ಪರಿಶೀಲನೆ ನಡೆಸುತ್ತೇನೆ ಎಂದರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ