NEWSನಮ್ಮರಾಜ್ಯಸಿನಿಪಥ

ಅಭಿಮಾನಿಗಳಿಗೆ ಸಿಹಿಸುದ್ದಿ : ಸೆ.15ರಂದು ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ

ಆನ್ ಲೈನ್ ಮೂಲಕ  ಶಂಕುಸ್ಥಾಪನೆ ನೆರವೇರಿಸಲಿರುವ ಸಿಎಂ ಬಿಎಸ್‌ವೈ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಹನ್ನೊಂದು ವರ್ಷದ ಬಳಿಕ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ಸಿಕ್ಕಿದೆ. ಅದೇನಪ್ಪ ಅಂದರೆ ಅರಮನೆಗಳ ನಗರ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಲಿದೆ.

ಈ ಬಗ್ಗೆ ಸ್ವತಃ ಭಾರತಿ ವಿಷ್ಣುವರ್ಧನ್ ಅವರಿಗೆ ಮಾಹಿತಿ ನೀಡಿದ್ದು, ವಿಷ್ಣು ಸ್ಮಾರಕಕ್ಕೆ ಮೈಸೂರಿನಲ್ಲಿ ಭೂಮಿ ಪೂಜೆಯನ್ನು ಇದೇ  ಸೆಪ್ಟೆಂಬರ್‌ 15ರಂದು  ನೆರವೇರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಎಂ ಅವರನ್ನು ಕರೆಯಲು ಬಂದಿದ್ದೇವೆ ಎಂದು ತಿಳಿಸಿದರು.

ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗುತ್ತಿದೆ. ಈ ತಿಂಗಳ 15ರಂದು ಸ್ಮಾರಕದ ಗುದ್ದಲಿ ಪೂಜೆ ಕಾರ್ಯಕ್ರಮವಿದೆ. ಸೂಕ್ತ ಭದ್ರತೆಗಾಗಿ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಕೋವಿಡ್ ಕಾರಣ ಸಿಎಂ ಗುದ್ದಲಿಪೂಜೆಗೆ ಬರಲು ಆಗುತ್ತಿಲ್ಲ. ಹೀಗಾಗಿ ಅವರು ಆನ್ ಲೈನ್ ಮೂಲಕ ವಿಷ್ಣು ಸ್ಮಾರಕದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ  ಎಂದರು.

ಇದೇ ವೇಳೆ ಡ್ರಗ್ಸ್ ಮಾಫಿಯಾ ಬಗ್ಗೆ ಮಾತನಾಡಿದ ಅನಿರುದ್ಧ್‌, ನಮಗೆ ಡ್ರಗ್ಸ್ ಮಾಫಿಯಾ, ಡ್ರಗ್ಸ್ ಜಾಲದ ಬಗ್ಗೆ ಅರಿವಿಲ್ಲ. ಈ ವಿಚಾರ ಮನಸ್ಸಿಗೆ ತುಂಬಾ ಬೇಜಾರಾಗುತ್ತಿದೆ. ಇಡೀ ಜಗತ್ತಿನಲ್ಲೇ ಈ ಮಾಫಿಯಾ ಇರಬಾರದು. ಯುವ ಪೀಳಿಗೆಯನ್ನು ಇದರಿಂದ ರಕ್ಷಿಸಬೇಕು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ