CrimeNEWSದೇಶ-ವಿದೇಶ

ಪತ್ರಕರ್ತೆಯರ ಬಂಧನಕ್ಕೆ ಸಂಪಾದಕರ ಒಕ್ಕೂಟ ಖಂಡನೆ – ತಕ್ಷಣ ಬಿಡುಗಡೆಗೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯ ಸರ್ಕಾರದ ವರ್ಚಸ್ಸಿಗೆ ಹಾನಿ ತರುವಂತಹ ವರದಿ ಪ್ರ ಕಟಿಸಿದ್ದಾರೆಂಬ ದೂರಿನ ಮೇಲೆ ದಾಖಲಾಗಿರುವ ಎಫ್ಐಆರ್ ಆಧಾರದ ಮೇಲೆ ತ್ರಿಪುರಾದ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿರುವ ಅಸ್ಸಾಂ ಪೊಲೀಸರ ಕ್ರಮವನ್ನು ಭಾರತೀಯ ಸಂಪಾದಕರ ಒಕ್ಕೂಟ (ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ) ಮತ್ತು ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್ಸ್ (ಐಡಬ್ಲ್ಯು ಪಿಸಿ) ಖಂಡಿಸಿದೆ.

ಈ ಕುರಿತು ಭಾನುವಾರ ಪತ್ರಿಕಾ ಪ್ರ ಕಟಣೆ ಬಿಡುಗಡೆಮಾಡಿರುವ ಒಕ್ಕೂಟ, ’ಪೊಲೀಸರ ಕ್ರಮವನ್ನು ಎಡಿಟರ್ಸ್ ಗಿಲ್ಡ್ ಖಂಡಿಸುತ್ತದೆ. ಬಂಧಿಸಿರುವ ಪತ್ರಕರ್ತೆಯರನ್ನು ತಕ್ಷಣವೇ ಬಿಡುಗಡೆಮಾಡಿ, ಅವರಮುಕ್ತ ಸಂಚಾರ ಸ್ವಾತಂತ್ರ್ಯವನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದೆ.

ಐಡಬ್ಲ್ಯು ಪಿಸಿ ಕೂಡ ಪೊಲೀಸರ ಕ್ರಮವನ್ನು ಖಂಡಿಸಿದೆ. ’ಬಂಧಿತ ಪತ್ರ ಕರ್ತೆಯರನ್ನು ವಿಚಾರಣೆಗಾಗಿ ತ್ರಿಪುರಾಕ್ಕೆ ಕರೆತರುತ್ತಾರೆಂದು ತಿಳಿದಿದ್ದೇ ವೆ. ಅವರನ್ನು ತಕ್ಷಣವೇ ಬಿಡುಗಡೆಮಾಡಬೇಕು. ಪತ್ರ ಕರ್ತೆಯರಿಗೆ ತಮ್ಮ ಕೆಲಸವನ್ನು ನಿರ್ಭೀತವಾಗಿಮಾಡಲು ಅವಕಾಶ ನೀಡಬೇಕು’ ಎಂದು ಸಂಘಟನೆ ಒತ್ತಾಯಿಸಿದೆ.

ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಘಟನೆಗಳ ಕುರಿತು ಮಾಡಿದ ವರದಿಯಲ್ಲಿ ಸರ್ಕಾರದ ಗೌರವಕ್ಕೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಎಚ್‌ಡಿಡಬ್ಲ್ಯುನ್ಯೂಸ್ ನೆಟ್‌ವರ್ಕ್‌ನ ಪತ್ರಕರ್ತೆಯರಾದ ಸಮೃದ್ಧಿ ಸುಕುನಿಯಾ ಮತ್ತು ಸ್ವರ್ಣಾ ಝಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನು ಆಧರಿಸಿ, ತ್ರಿಪುರಾಕ್ಕೆ ತೆರಳುತ್ತಿದ್ದ ಇವರನ್ನು ಕರೀಂಗಂಜ್‌ನ ನೀಲಂಬಜಾರ್‌ನಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಇದನ್ನು ಎರಡೂ ರಾಜ್ಯಗಳ ಪೊಲೀಸರು ಖಚಿತಪಡಿಸಿದ್ದಾರೆ.

ಬಂಧಿತರನ್ನು ಸರ್ಕಾರ ನಡೆಸುವ ಆಶ್ರಯ ಮನೆಯಲ್ಲಿ ರಾತ್ರಿ ಇರಿಸಲಾಗಿದ್ದು, ಸೋಮವಾರ ತ್ರಿಪುರಾ ಪೊಲೀಸರಿಗೆ ಹಸ್ತಾಂತರಿಸಲಾಯಿತು ಎಂದು ಅಸ್ಸಾಂ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇವರನ್ನು ಸಿಲ್ಚಾರ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿದೆ. ’ತ್ರಿಪುರಾ ಪೊಲೀಸರು, ಇವರನ್ನು ಬಂಧಿಸುವಂತೆ ತಮಗೆ ಸೂಚಿಸಿದ್ದರು ಎಂದು ಅಸ್ಸಾಂ ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಪತ್ರಕರ್ತೆಯರ ವಿರುದ್ಧ ವಿಶ್ವ ಹಿಂದೂಪರಿಷತ್ತಿನ ಬೆಂಬಲಿಗರೊಬ್ಬರು ನೀಡಿದದೂರಿನ ಮೇಲೆ ಫಾಟಿಕ್ರೋ ಯ್ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು . ಇದನ್ನು ಆಧರಿಸಿ, ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸುಕುನಿಯಾಅವರು, ’ನಮ್ಮನ್ನು ಅಸ್ಸಾಂನ ಕರಿಂಗಂಜ್‌ನ ನೀಲಂಬಜಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಗೋಮತಿ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದ ಮೇಲೆ ನಮ್ಮನ್ನು ಬಂಧಿಸಿರುವುದಾಗಿ ನೀಲಂಬಜಾರ್ ಠಾಣೆಯ ಉಸ್ತುವಾರಿ ಅಧಿಕಾರಿ ತಿಳಿಸಿದರು’ ಎಂದು ಟ್ವೀಟ್‌ ಮಾಡಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ