Breaking NewsNEWSಶಿಕ್ಷಣ-

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ಪರೀಕ್ಷೆ ರದ್ದು: ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ದಿನದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ (ಮೇ) ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ನು 2020-21ನೇ ಸಾಲಿನ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಪಿಯುಸಿ ಪರೀಕ್ಷೆ ಪ್ರಾರಂಭಕ್ಕೆ 15-20 ದಿನಗಳ ಮುನ್ನ ದಿನಾಂಕ ಪ್ರಕಟಿಸುತ್ತೇವೆ. ಪರೀಕ್ಷೆ ಮುಂದೂಡಿಕೆಯಾದ ಕಾರಣ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ವಿಚಲಿತರಾಗದೆ ಅಭ್ಯಾಸ ಮುಂದುವರಿಸಿ ಎಂದು ಸಲಹೆ ನೀಡಿದ್ದಾರೆ.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೆ ಮುನ್ನ ಬ್ರಿಡ್ಜ್ ಕೋರ್ಸ್ ನಡೆಸಲಾಗುತ್ತದೆ. ಅಲ್ಲದೆ ಇಲಾಖೆಯ ಯೂಟ್ಯೂಬ್ ಚಾನಲ್ ಮೂಲಕ ಕೂಡಲೇ ಬ್ರಿಡ್ಜ್ ಕೋರ್ಸ್ ಲಭ್ಯವಾಗುವಂತೆ ಮಾಡಲಾಗುವುದು ಎಂದರು.

ಪರೀಕ್ಷೆ ಮುಂದೂಡಿದ ಕಾರಣದಿಂದ ವಿದ್ಯಾರ್ಥಿಗಳೊಡನೆ ಸತತ ಸಂಪರ್ಕದಲ್ಲಿದ್ದು ಉಪನ್ಯಾಸಕರು ವರ್ಕ್ ಫ್ರಮ್ ಹೋಮ್ ಮಾಡುವಂತೆ ಸಚಿವ ಸೂಚಿಸಿದ್ದಾರೆ.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿ ಸರ್ಕಾರ ಇದಾಗಲೇ ಆದೇಶ ಹೊರಡಿಸಿತ್ತು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು