ಬೆಂಗಳೂರು: ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಎಲ್ಲ ಶಾಲೆಗಳನ್ನು ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದು, ಆರೋಗ್ಯ ಇಲಾಖೆ ಅನುಮತಿ ಕೊಟ್ಟರೆ ಶಾಲೆ ಆರಂಭಿಸಲಾಗುವುದು.
ಕೊರೊನಾ ಪಾಸಿಟಿವಿಟಿ ದರ ಶೇ.3ಕ್ಕಿಂತ ಕಡಿಮೆ ಇದ್ದರೆ ಅಂಥ ಪ್ರದೇಶಗಳಲ್ಲಿ ಶಾಲೆ ತೆರೆಯಲು ಯಾವುದೇ ಅಡ್ಡಿ ಇಲ್ಲ ಎಂದು ಶಿಕ್ಷಣ ತಜ್ಞರು ಇಂದು ಶಾಲೆ ಆರಂಭ ಮಾಡುವ ಕುರಿತು ವಿಕಾಶ ಸೌಧದಲ್ಲಿ ನಡೆದ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಏಕಕಾಲದಲ್ಲಿ ಶಾಲೆ ಆರಂಭಿಸುವ ಬದಲು ಎಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇದೆಯೋ ಅಲ್ಲಿ ಭೌತಿಕ ತರಗತಿ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ.