NEWSಶಿಕ್ಷಣ-

ಮೈಸೂರು ವಿವಿಯ ವಿವಿಧ ಕಟ್ಟಡ, ಯೋಜನೆಗಳಿಗೆ ಸಚಿವ ಡಾ. ಅಶ್ವತ್ಥ ನಾರಾಯಣ ಚಾಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕಟ್ಟಡ ಹಾಗೂ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು.

ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೊದಲಿಗೆ ಸಂಶೋಧನಾ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಹಾಗೂ ಗಣಕ ಅಧ್ಯಯನ ವಿಭಾಗದ ಎರಡನೇ ಮಹಡಿ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು.

ನಂತರ ಕೇಂದ್ರ ಸರ್ಕಾರದ ರೂಸಾ ಯೋಜನೆಯಡಿ ರೂಪಿಸಿರುವ ಕೆರೆಯರ್ ಹಬ್‌, ಮೈಸೂರು ವಿವಿಯ ಸಮುದಾಯ ರೇಡಿಯೋ ‘ರೇಡಿಯೋ ಮಾನಸ’, ಹಾಸನ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣಿಕ ಭವನ ಹಾಗೂ ಯುವರಾಜ ಕಾಲೇಜಿನ ರೂಸಾ 2.0 ಅನುದಾನದ ಅಡಿಯಲ್ಲಿ ನಿರ್ಮಿಸಲಾದ ನೂತನ ಕಟ್ಟಡ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನೂತನ ಘಟಕ ಕಾಲೇಜುಗಳ ಆರಂಭಕ್ಕೆ ಆನ್‌ಲೈನ್ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಕುಲಪತಿ ಪ್ರೊ. ಜಿ.ಹೇಮಂತಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸುರಕ್ಷತೆಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಒಟ್ಟು 72 ಸಿಸಿ ಕ್ಯಾಮರಾಗಳಿದ್ದು, ಹೊರಗಿನವರೂ ಬಂದರೂ ಪ್ರವೇಶ ಹಾಗೂ ಎಕ್ಸಿಟ್‌ ನಿಗಾ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಂತರ ಕೆರಿಯರ್ ಹಬ್‌ನಲ್ಲಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ ಡಿಜಿಟಲ್ ಸಾಕ್ಷ್ಯಚಿತ್ರವನ್ನು ಸಚಿವರು ಹಾಗೂ ಗಣ್ಯರು ವೀಕ್ಷಿಸಿದರು. ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್  ಇದ್ದರು.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...