NEWSಶಿಕ್ಷಣ-

ಮೈಸೂರು: ಒಂದೂವರೆ ವರ್ಷ ಬಳಿಕ ಶಾಲಾರಂಭ: ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಮುಂಜಾಗ್ರತೆ ಕ್ರಮಗಳೊಂದಿಗೆ ಶಾಲೆಗಳನ್ನು ತೆರೆಯುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ ಎಲ್ಲೆಡೆ ಇಂದಿನಿಂದ 9ರಿಂದ ದ್ವಿತೀಯ ಪಿಯುಸಿವರೆಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ.

ಇನ್ನು ಇಂದು ಶಾಲೆಗಳು ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾವರಣದಲ್ಲಿ ರಂಗೋಲಿ ಬಿಡಿಸಿ, ಹೂ, ಮಾವು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ನಗರದ ಹಲವು ಶಾಲೆಗಳು ಅಲಂಕಾರದಿಂದ ಕಂಗೊಳಿಸುತ್ತಿದ್ದು, ಗೋ ಕೊರೊನಾ ಎಂದು ಸಾರುವಂತಿವೆ. ವಿದ್ಯಾರ್ಥಿಗಳು ಸಹ ಖುಷಿಯಿಂದ ಮೊದಲ ದಿನ ಶಾಲೆಗಳಿಗೆ ಆಗಮಿಸಿ ಸಂಭ್ರಮಿಸುತ್ತಿದ್ದಾರೆ.

ಇನ್ನು ಮೈಸೂರಿನ ಸಂತ ಮೇರಿಸ್‌ ಪ್ರೌಢ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶಾಲೆಯನ್ನು ಹೂವು, ಮಾವಿನ ತೋರಣ ಹಾಗೂ ಬಲೂನುಗಳಿಂದ ಸಿಂಗರಿಸಲಾಗಿತ್ತು. ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಶಾಲೆ ಶುರುವಾಗುತ್ತಿರುವ ಸಂತಸ ಹಂಚಿಕೊಳ್ಳಲಾಗುತ್ತಿದೆ.

ಬಹಳ ಮುಖ್ಯವಾಗಿ ಸ್ಯಾನಿಟೈಸೇಷನ್‌, ಸಾರ್ವಜನಿಕ ಅಂತರ ಮೊದಲಾದ ಕೋವಿಡ್‌ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ.

ಕೃಷ್ಣರಾಜ ಯುವ ಬಳಗ ಹಾಗೂ ಅಪೂರ್ವ ಸ್ನೇಹ ಬಳಗ ವತಿಯಿಂದ ವಿದ್ಯಾರಣ್ಯಪುರಂನ ಟಿ ಎಸ್ ಸುಬ್ಬಣ್ಣನವರ ಸಾರ್ವಜನಿಕ ಶಾಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಮಾ.ವಿ.ರಾಮಪ್ರಸಾದ್ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಆರತಿ ಬೆಳಗಿ, ಗುಲಾಬಿ ಹೂವು, ಪುಸ್ತಕ, ಪೆನ್ ಹಾಗೂ ಮಾಸ್ಕ್ ವಿತರಿಸಿ ಸ್ವಾಗತ ಕೋರಲಾಯಿತು.

ಮೈಸೂರು ಜಿಲ್ಲೆಯಲ್ಲಿ 766 ಶಾಲೆಗಳು, 257 ಕಾಲೇಜುಗಳು ತೆರೆದಿದ್ದು, ಅವುಗಳಲ್ಲಿ 232 ಸರ್ಕಾರಿ ಶಾಲೆಗಳು, 45 ಸಮಾಜ ಕಲ್ಯಾಣ ಇಲಾಖೆಯ ಶಾಲೆಗಳು, 134 ಅನುದಾನಿತ ಖಾಸಗಿ ಶಾಲೆಗಳಾದರೆ, 349 ಅನುದಾನ ರಹಿತ ಖಾಸಗಿ ಶಾಲೆಗಳು, ಕೇಂದ್ರ ವಿದ್ಯಾಲಯಗಳು 6 ಸೇರಿವೆ.

ಅಂತೆಯೇ, 3 ವಸತಿ ಕಾಲೇಜು, 74 ಕಾಲೇಜು ಸೇರಿ ಒಟ್ಟು 77 ಸರ್ಕಾರಿ ಕಾಲೇಜುಗಳಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನೇಕೆ ತಡ ಹೊಡಿರಿ ಘಂಟೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ