NEWSಶಿಕ್ಷಣ-

ಹಲವು ಬಾರಿ ಮುಂದೂಡಿದ್ದ ಕೆ-ಸೆಟ್ ಪರೀಕ್ಷೆ ಇಂದು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಅನ್‌ಲಾಕ್ ನಂತರ ಯುಜಿಸಿ ಮಾರ್ಗದರ್ಶನದಂತೆ 41 ವಿಷಯಗಳಿಗೆ ಕೆ-ಸೆಟ್ ಪರೀಕ್ಷೆಯು ಇಂದು (ಜು.25) ನಡೆಯಲಿದೆ.

ಎರಡು ಬಾರಿ ಮುಂದೂಡಿಕೆಯಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ಭಾನುವಾರ ಮೈಸೂರು, ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರಿನ ನೋಡೆಲ್ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 85 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಳಗ್ಗೆ 9.30ರಿಂದ 10.30ರವರೆಗೆ ಪೇಪರ್-1, 11ರಿಂದ 1 ಗಂಟೆವರೆಗೆ ಪೇಪರ್-2 ಪರೀಕ್ಷೆ ನಡೆಯಲಿದೆ. ಪ್ರತಿ ಕೊಠಡಿಯಲ್ಲಿ 24ರಿಂದ 30 ವಿದ್ಯಾರ್ಥಿಗಳನ್ನು ಕೂರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದಕ್ಕೂ ಮುನ್ನ ಪ್ರತಿ ಕೊಠಡಿಗೂ ಸ್ಯಾನಿಟೈಸ್ ಮಾಡಿಸಲಾಗಿದ್ದು, ಜತೆಗೆ ಅಭ್ಯರ್ಥಿಗಳಿಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರುತ್ತದೆ ಎಂದು ಕೆ-ಸೆಟ್ ಪರೀಕ್ಷಾ ಸಂೋಂಜನಾಧಿಕಾರಿ ಎಚ್.ರಾಜಶೇಖರ್ ತಿಳಿಸಿದ್ದಾರೆ.

ʻಈ ಮೊದಲು 2020ರ ಏ.11ರಂದು ಕೆ-ಸೆಟ್ ಪರೀಕ್ಷೆ ನಡೆಸಲು ಆಯೋಜಿಸಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ನಿಗದಿಯಾದ್ದರಿಂದ ಏ.25ಕ್ಕೆ ಮುಂದೂಡಲಾಗಿತ್ತು.

ಅಷ್ಟೊತ್ತಿಗೆ ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ 2ನೇ ಹಂತದ ಲಾಕ್‌ಡೌನ್ ಘೋಷಣೆ ಮಾಡಲಾಗಿ, 2ನೇ ಬಾರಿಯೂ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಯಿತುʼ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ