ಬೆಂಗಳೂರು: ಕೊರೊನಾ ಅನ್‌ಲಾಕ್ ನಂತರ ಯುಜಿಸಿ ಮಾರ್ಗದರ್ಶನದಂತೆ 41 ವಿಷಯಗಳಿಗೆ ಕೆ-ಸೆಟ್ ಪರೀಕ್ಷೆಯು ಇಂದು (ಜು.25) ನಡೆಯಲಿದೆ.
ಎರಡು ಬಾರಿ ಮುಂದೂಡಿಕೆಯಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ ಭಾನುವಾರ ಮೈಸೂರು, ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರಿನ ನೋಡೆಲ್ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 85 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬೆಳಗ್ಗೆ 9.30ರಿಂದ 10.30ರವರೆಗೆ ಪೇಪರ್-1, 11ರಿಂದ 1 ಗಂಟೆವರೆಗೆ ಪೇಪರ್-2 ಪರೀಕ್ಷೆ ನಡೆಯಲಿದೆ. ಪ್ರತಿ ಕೊಠಡಿಯಲ್ಲಿ 24ರಿಂದ 30 ವಿದ್ಯಾರ್ಥಿಗಳನ್ನು ಕೂರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದಕ್ಕೂ ಮುನ್ನ ಪ್ರತಿ ಕೊಠಡಿಗೂ ಸ್ಯಾನಿಟೈಸ್ ಮಾಡಿಸಲಾಗಿದ್ದು, ಜತೆಗೆ ಅಭ್ಯರ್ಥಿಗಳಿಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರುತ್ತದೆ ಎಂದು ಕೆ-ಸೆಟ್ ಪರೀಕ್ಷಾ ಸಂೋಂಜನಾಧಿಕಾರಿ ಎಚ್.ರಾಜಶೇಖರ್ ತಿಳಿಸಿದ್ದಾರೆ.
ʻಈ ಮೊದಲು 2020ರ ಏ.11ರಂದು ಕೆ-ಸೆಟ್ ಪರೀಕ್ಷೆ ನಡೆಸಲು ಆಯೋಜಿಸಲಾಗಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಜನತಾ ಕರ್ಫ್ಯೂ ನಿಗದಿಯಾದ್ದರಿಂದ ಏ.25ಕ್ಕೆ ಮುಂದೂಡಲಾಗಿತ್ತು.
ಅಷ್ಟೊತ್ತಿಗೆ ಕೋವಿಡ್ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ 2ನೇ ಹಂತದ ಲಾಕ್‌ಡೌನ್ ಘೋಷಣೆ ಮಾಡಲಾಗಿ, 2ನೇ ಬಾರಿಯೂ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಯಿತುʼ.