Please assign a menu to the primary menu location under menu

CrimeNEWSಶಿಕ್ಷಣ-

ಮಗುವಿನ ದಾಖಲಾತಿಗೆ ಶಾಲೆಗೆ ಬಂದ ಮಹಿಳೆಯಿಂದ ಮಸಾಜ್‌ ಮಾಡಿಸಿಕೊಂಡ ಬಿಬಿಎಂಪಿ ಮುಖ್ಯೋಪಧ್ಯಾಯ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಗುವಿನ ದಾಖಲಾತಿಗೆಂದು ಶಾಲೆಗೆ ಬಂದ ಮಹಿಳೆಯೊಬ್ಬರಿಂದ ಮಸಾಜ್‌ ಮಾಡಿಸಿಕೊಂಡ ಆರೋಪದ ಮೇರೆಗೆ ಬಿಬಿಎಂಪಿ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಧ್ಯಾಯರೊಬ್ಬರನ್ನು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಲೋಕೇಶಪ್ಪ ಮಸಾಜ್ ಮಾಡಿಸಿಕೊಂಡ ಆರೋಪ ಎದುರಿಸುತ್ತಿರುವವರು. ಈ ಸಂಬಂಧ ಇಲಾಖಾ ವಿಚಾರಣೆ ನಿರೀಕ್ಷಿಸಿ, ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವಿಶೇಷ ಆಯುಕ್ತರು ಆದೇಶ ಮಾಡಿದ್ದಾರೆ.

ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಲೋಕೇಶಪ್ಪ ಪ್ರಭಾರದ ಮೇಲೆ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯಲ್ಲಿ ಮಗುವಿನ ದಾಖಲಾತಿಗೆಂದು ಮಹಿಳೆಯೊಬ್ಬರು ಶಾಲೆಗೆ ಬಂದಿದ್ದರು.

ಈ ವೇಳೆ ಮಹಿಳೆಯಿಂದ ತಾವು ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯ ಕಟ್ಟಡದಲ್ಲಿ ಮಸಾಜ್ ಮಾಡಿಕೊಂಡಿರುವ ಸಂಬಂಧ ದೃಶ್ಯಾವಳಿಗಳು ಸೆ.22 ರಂದು ಸಾರ್ವಜನಿಕ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ಸಂಬಂಧ ಲೋಕೇಶಪ್ಪ ಅವರನ್ನು ಖುದ್ದು ವಿಚಾರಿಸಿದ್ದು, ಮಸಾಜ್ ಮಾಡಿಸಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಪಾಲಿಕೆಯ ಕೋದಂಡರಾಮಪುರ ಪ್ರೌಢಶಾಲೆಯ ಸರ್ಕಾರಿ ಕಟ್ಟಡವನ್ನು ತಮ್ಮ ಖಾಸಗಿ ಕೆಲಸಕ್ಕೆ ಬಳಸಿಕೊಂಡಿರುವುದು ಸರ್ಕಾರಿ ಕೆಲಸದ ಸಮಯದಲ್ಲಿ ಕರ್ತವ್ಯ ಲೋಪ ಎಸಗಿರುವುದರಿಂದ ಕರ್ನಾಟಕ ನಾಗರಿಕ ನಿಯಮಾವಳಿಗಳನ್ವಯ ಈ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ವಿಚಾರಣೆ ನಿರೀಕ್ಷಿಸಿ, ಸೇವೆಯಿಂದ ಅಮಾನತುಪಡಿಸಲಾಗಿದೆ ಹಾಗೂ 1958ರ ಕೆ.ಸಿ.ಎಸ್‌.ಆರ್‌ ನಿಯಮ 98 ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ