NEWSಶಿಕ್ಷಣ-ಸಂಸ್ಕೃತಿ

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಮುಕ್ತ ಚರ್ಚೆಗೆ ಸಿದ್ಧ : ಸಿಎಂ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೂತನ ರಾಷ್ಟ್ರೀ ಯ ಶಿಕ್ಷಣ ನೀತಿ (ಎನ್ಇಪಿ) ಬಗ್ಗೆ ಮುಕ್ತವಾಗಿ ಚರ್ಚೆಮಾಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಪ್ರಸ್ತುತ ಕಾಲಕ್ಕೆ ತಕ್ಕಂತೆ ಶಿಕ್ಷಣ ಕೊಟ್ಟು ಯುವಕರಿಗೆ ಒಳ್ಳೆಯ ಭವಿಷ್ಯ ರೂಪಿಸಲು ಈ ನೀತಿ ಪೂರಕವಾಗಿದೆ. ಇದರಿಂದ ಕ್ರಾಂತಿಕಾರಿ ಬದಲಾವಣೆ ಸಾಧ್ಯ . ಈ ಬಗ್ಗೆ ವಿದ್ಯಾ ರ್ಥಿಗಳಿಗೆ ತಿಳಿ ಹೇಳುತ್ತೇ ವೆ ಎಂದರು.

ನೀತಿ ಜಾರಿಗೂ ಮೊದಲು ಎಲ್ಲ ಕಡೆ ಚರ್ಚೆ ಆಗಿದೆ. ವಿಶ್ವ ವಿದ್ಯಾಲಯ ಮಟ್ಟದಲ್ಲೂ ಚರ್ಚೆ ನಡೆದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಬಗ್ಗೆ ಇನ್ನೊಂದು ಸಮಿತಿಮಾಡಿ ಚರ್ಚೆಮಾಡುತ್ತೇವೆ. ಯಾರೂ ಕೂಡಾ ಆತಂಕಪಡುವ ಅಗತ್ಯ ಇಲ್ಲ ಎಂದೂ ಹೇಳಿದರು.

ಇನ್ನು ವಿಶ್ವೇಶ್ವರಯ್ಯ ಅವರ ಜಯಂತಿಯನ್ನು ಇಂಜಿನಿಯರ್ ದಿನ ಎಂದು ನಾವು ಆಚರಣೆಮಾಡುತ್ತೇವೆ. ನಿಜವಾಗಿ ನಾಡು ಕಟ್ಟಿದವರು ಶ್ರಮಿಕ ವರ್ಗ. ಹೊಲದಲ್ಲಿ ರೈತರು ಮತ್ತು ಕಾರ್ಮಿಕರು. ತಳಮಟ್ಟದಲ್ಲಿರುವ ದುಡಿಯುವ ವರ್ಗ. ವಿಶ್ವೇಶ್ವರಯ್ಯ ಅವರು ಈ ವರ್ಗವನ್ನು ಪ್ರ ತಿನಿಧಿಸುವವರು ಎಂದು ಮುಖ್ಯಮಂತ್ರಿ ಬಣ್ಣಿಸಿದರು.

ಪ್ರಗತಿಪರ ಚಿಂತನೆಯಿಂದ ನಾಡು ಕಟ್ಟಿದವರು ವಿಶ್ವೇಶ್ವರಯ್ಯ . ನಾವು ಕೂಡಾ ಅವರ ಹಾದಿಯಲ್ಲಿ ನಾಡು ಕಟ್ಟಲು ಸಂಕಲ್ಪ ಮಾಡಬೇಕು. ಕೆ.ಆರ್. ವೃತ್ತದಲ್ಲಿ ವಿಶ್ವೇಶ್ವರಯ್ಯ ಪ್ಲಾಜಾಮಾಡಿದ್ದೇವೆ. ಇನ್ನೂ 30 ವೃತ್ತ ಗಳಲ್ಲಿ ಬಿಬಿಎಂಪಿ ಇಂಥ ಪ್ಲಾಜಾಮಾಡಲಿದೆ. ಇದರಿಂದ ಬೆಂಗಳೂರಿನ ಅಂದ ಹೆಚ್ಚಲಿದೆ ಎಂದರು.

ಇದಕ್ಕೂ ಮುನ್ನ ಇಂಜಿನಿಯರ್ ಗಳ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೆ.ಆರ್.ವೃತ್ತದಲ್ಲಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಿರುವ 160 ಅಡಿ ಕಾರಂಜಿಯನ್ನು ಉದ್ಘಾಟಿಸಿದರು.

ನಂತರ ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘದ ವತಿಯಿಂದ ನಿರ್ಮಿಸಿರುವ ‘ಇಂಜಿನಿಯರ್ ಭವನ’, ಇಂಜಿನಿಯರ್‌ಗಳ ತರಬೇತಿ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...