NEWSಶಿಕ್ಷಣ-ಸಂಸ್ಕೃತಿ

ಸಮಾಜದ ಅನಿಷ್ಟ ಪದ್ಧತಿ ಹೋಗಲಾಡಿಸಲು ಬೀದಿನಾಟಕಗಳು ಆಯುಧವಾಗಲಿ : ಡಿಡಿಪಿಯು ಉಮೇಶಪ್ಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅಸ್ಪೃಶ್ಯತೆ ಒಳಗೊಂಡಂತೆ ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಬೀದಿ ನಾಟಕಗಳು ಒಂದು ಆಯುಧವಾಗಲಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಉಮೇಶಪ್ಪ ಹೇಳಿದರು.

ನಗರದ ಜಿಲ್ಲಾ ವಾರ್ತಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಅಸ್ಪೃಶ್ಯತಾ ನಿವಾರಣೆ ಕುರಿತು ನಾಟಕ ರಚನಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅಸ್ಪೃಶ್ಯತಾ ಎಂಬುವುದು ಕೇವಲ ಜಾತಿಗೆ ಮಾತ್ರ ಸೀಮಿತಗೊಳ್ಳದೇ ಸಮಾಜದಲ್ಲಿರುವ ಎಲ್ಲಾ ಬಗೆಯ ಅಸ್ಪೃಶ್ಯತೆಯ ನಿವಾರಣೆಯ ಧ್ವನಿಯಾಗಿ, ಒಂದು ಶಕ್ತಿಯಾಗಿ ಬೀದಿನಾಟಕ ರಚನೆಯಾಗಲಿ ಎಂದರು.

ಸಮಾಜ ಪರಿವರ್ತನೆಗೆ ಬಹುದೊಡ್ಡ ಪಾತ್ರ ವಹಿಸಿದ್ದ ಬೀಟಿ ನಾಟಕಗಳು ಇಂದು ಕಡಿಮೆಯಾಗಿವೆ. ಕಲಾವಿದರು ಜನಪ್ರಿಯತೆಯ ಆಸೆಯದಿಂದ ಟಿವಿಯ ರಿಯಾಲಿಟಿ ಶೋಗಳಲ್ಲಿ ನಟಿಸುವವರು ಹೆಚ್ಚಾಗಿದ್ದಾರೆ.

ಬೀದಿ ನಾಟಕ ಸಾಹಿತ್ಯಕ್ಕೆ ಇತರ ಸಾಹಿತ್ಯ ಪ್ರಕಾರಗಳಿಗಿಂತ ಭಿನ್ನವಾದ ಶಕ್ತಿ ಮತ್ತು ಧ್ವನಿ ಇದೆ. ಲೇಖಕರು, ಬರಹಗಾರರು, ಕಲಾವಿದರು ಬೀದಿ ನಾಟಕ ಮಾಧ್ಯಮವನ್ನು ಬಳಸಿಕೊಂಡು ಸಾಮಾಜಿಕ ಬದಲಾವಣೆಯ ನಿಟ್ಟಿನಲ್ಲಿ ಮುಂದಾಗುವಂತೆ ಸಲಹೆ ನೀಡಿದರು.

ಇದಕ್ಕೂ ಮೊದಲು ಸಮಾಜ ಕಲ್ಯಾಣ ಇಲಾಖೆಯ ಪ್ರತ್ರಾಂಕಿತ ವ್ಯವಸ್ಥಾಪಕ ಆಂಜನೇಯ ಅವರು ಮಾತನಾಡಿ, ದೌರ್ಜನ್ಯ ತಡೆಗಟ್ಟಲು ಅನೇಕ ಕಾಯಿದೆಗಳು ಜಾರಿಗೆ ಬಂದಿದ್ದು, ಕಾಯ್ದೆಗಳ ಅರಿವು ಮೂಡಿಸಲು ಕಲಾವಿದರು ನಾಟಕ ರಚನೆ ಮಾಡಬೇಕು.

ಸಮಾಜದಿಂದ ಅಸ್ಪೃಶ್ಯತೆ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ಪ್ರಜೆಯು ಮುಂದಾಗಬೇಕು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳಿದ್ದಂತೆ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸಮಾನತೆಯ ಬಗ್ಗೆ ಅರಿವು ಮೂಡಿಸುವುದು ಕಲಾ ಶಿಕ್ಷಕರ ಕೆಲಸವಾಗಬೇಕು ಎಂದು ಹೇಳಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಮಾತನಾಡಿದರು. ಶಿಬಿರಾರ್ಥಿಗಳಿಗೆ ಹಾಗೂ ಸಂಪನ್ಮೂಲ ವ್ಯಕ್ತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಸಮಾರಂಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಸಾಹಿತಿ ಸತೀಶ ಕುಲಕರ್ಣಿ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಶರೀಫ ಮಾಕಪ್ಪನವರ ಹಾಗೂ ರೇಣುಕಾ ಚಲವಾದಿ ಪ್ರಾರ್ಥನಾ ಗೀತೆ ಹಾಡಿದರು. ಗಣೇಶ ಗುಡಗುಡಿ, ಪ್ರವೀಣ ಕರಿಯಣ್ಣವರ, ಸತೀಶ ತಿಮ್ಮಣ್ಣವರ, ಪ್ರಕಾಶ ದಿಡಗೂರ, ಮಧುಕುಮಾರ ಹರಿಜನ ಉಪಸ್ಥಿತರಿದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ