Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಮುಜುಗರದ ನಡುವೆ ನೈಟ್‌ ಕರ್ಫ್ಯೂ ವಾಪಸ್‌ ಪಡೆದ ಸರ್ಕಾರ: ಜನತೆ ನಿರಾಳ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ರಾಜ್ಯದ ಜನರನ್ನು ಗೊಂದಲದಲ್ಲಿ ದೂಡಿದಲ್ಲದೆ ಸರ್ಕಾರವನ್ನು ಗೊಂದಲಕ್ಕೆ ಸಿಕ್ಕಿಸಿದ್ದ ಸಿಎಂ ಸೇರಿ ಕೆಲ ಸಚಿವರು ನಿನ್ನೆ ಹೇಳಿಕೆ ನೀಡಿದ್ದ ನೈಟ್ ಕರ್ಫ್ಯೂವನ್ನು ಇಂದು ಕೊನೆಗೂ ಹಿಂಪಡೆಯುವ ಮೂಲಕ ಜನರ ಗೊಂದಲಕ್ಕೆ ಅಂತ್ಯ ಹಾಡಿದ್ದಾರೆ. ಆದರೆ, ತಾವು ಮಾತ್ರ ನಗೆಪಾಟಲಿಗೆ ಗುರಿಯಾಗಿದ್ದಾರೆ.

ಹೌದು! ಸರ್ಕಾರ ಎಂದರೆ ರಾಜ್ಯದಲ್ಲಿ ಇರುವ ಸುಮಾರು ಏಳುವರೆಕೋಟಿ ಜನರ ಯೋಗ ಕ್ಷೇಮವನ್ನು ವಿಚಾರಿಸುವ ಸಂಪರ್ಕಕೊಂಡಿ. ಆದರೆ ಅದರ ಬಗ್ಗೆ ಅರಿವಿಲ್ಲದಂತೆ ಸರ್ಕಾರದ ಪ್ರಮುಖ ಮೇಟಿಗಳೆ ನಡೆಸುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂಬುವುದು ಅದೇ ಜನರ ಅನಿಸಿಕೆಕೂಟ ಹೌದು.

ಹೀಗಾಗಿ ತಾವು ಸಾರ್ವಜನಿಕರ ಅನುಕೂಲತೆಗಾಗಿ ಏನೆ ನಿರ್ಧಾರ ತೆಗೆದುಕೊಂಡರು ಅದಕ್ಕೆ ಒಂದು ಅರ್ಥವಿರಬೇಕು ಮತ್ತು ಅದನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅಂತಿಮ ಹೆಜ್ಜೆ ಇಡಬೇಕು. ಆದರೆ ಅದನ್ನು ಬಿಟ್ಟು ಈರೀತಿ ಸಿಕ್ಕ ಸಿಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೂ ಮುಜುಗರ ಮತ್ತು ಜನರಿಗೂ ಸಮಸ್ಯೆ ಇದನ್ನು ಮೇಟಿಗಳು ಅರಿತು ನಡೆದರೆ ಎಲ್ಲರಿಗೂ ಒಳಿತು ಎಂಬ ಅಭಿಪ್ರಾಯ ಜನರ ನಡುವಿನಿಂದ ಕೇಳಿ ಬರುತ್ತಿದೆ.

ಒಟ್ಟಾರೆ ನೈಟ್‌ ಕರ್ಫ್ಯೂ ವಾಪಸ್‌

ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲ ಎಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಯಡಿಯೂರಪ್ಪ ಅವರು, ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.

ರೂಪಾಂತರ ಹೊಂದಿದ ವೈರಸ್ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಎರಡು ದಿನಗಳ ಹಿಂದೆ ಇದೇ ಡಿಸೆಂಬರ್ 24ರಿಂದ ಜನವರಿ 1ರವರೆಗೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿತ್ತು. ಕರ್ಫ್ಯೂ ಸಂಬಧ ಸರ್ಕಾರ ನೆನ್ನೆ ಎರಡು ಬಾರಿ ನಿರ್ಧಾರ ಬದಲಿಸಿತ್ತು.

ಸರ್ಕಾರದ ಈ ಅಸ್ಪಷ್ಟ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ. ಸಂಪುಟ ಸಹೋದ್ಯೋಗಿಗಳು, ಹಿರಿಯ ಅಧಿಕಾರಿಗಳು ಸಹ ವಿರೋಧ ವ್ಯಕ್ತಪಡಿಸಿದ್ದರು. ಇದರ ಜೊತೆಗೆ ವಿಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಸರ್ಕಾರ ಹಿಂಪಡೆದಿದೆ.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂಸ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ