NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಇನ್ನೂ ಮುಗಿಯದ ಸಂಪುಟ ಸರ್ಕಸ್‌: ವರಿಷ್ಠರ ಭೇಟಿ ಬಳಿಕವೂ ಅಡಕತ್ತರಿಯಲ್ಲೇ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಮಂತ್ರಿ ಮಂಡಲ ವಿಸ್ತರಣೆ ಕುರಿತಂತೆ ಕೇಂದ್ರದ ವರಿಷ್ಠರ ಜತೆಗೆ ಇಂದು ಚರ್ಚೆ ನಡೆದಿದ್ದು, ಶೀಘ್ರದಲ್ಲೇ ಶುಭ ಸುದ್ದಿ ಸಿಗಲಿದೆ. ಕೇಂದ್ರ ನಾಯಕರ ಜೊತೆಗಿನ ಸಭೆ, ತಮಗೆ ಸಮಾಧಾನ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಸಚಿವ ಅಮಿತ್​ ಶಾ ದೆಹಲಿಗೆ ಆಹ್ವಾನಿಸುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮಗ ವಿಜಯೇಂದ್ರ ಜತೆಗೂಡಿ ಇಂದು ದೆಹಲಿಗೆ ಆಗಮಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ, ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ವಿಸ್ತೃತವಾದ ಚರ್ಚೆ ನಡೆದಿದೆ. ಕೇಂದ್ರ ನಾಯಕರಿಗೆ ಎಲ್ಲಾ ರೀತಿಯ ಮಾಹಿತಿಯನ್ನು ನೀಡಿದ್ದೇವೆ. ಆದಷ್ಟು ಶೀಘ್ರದಲ್ಲಿಯೇ ಶುಭ ಸುದ್ದಿ ಸಿಗುವ ವಿಶ್ವಾಸವಿದೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಿಳಿಸಿದರು.

ಆದಾಗ್ಯೂ, ಮಂತ್ರಿ ಮಂಡಲ ವಿಸ್ತರಣೆಯೇ ಅಥವಾ ಪುನಾರಚನೆಯೋ ಎಂಬುದರ ಬಗ್ಗೆ ಗೊಂದಲಕಾರಿ ಹೇಳಿಕೆಗಳನ್ನು ನೀಡಿದ ಮುಖ್ಯಮಂತ್ರಿ, ಈ ವಿಚಾರದಲ್ಲಿ ಕೇಂದ್ರ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ವರಿಷ್ಠರಿಗೆ ಸಂತೋಷವನ್ನುಂಟುಮಾಡಿದ್ದು, ಮುಂಬರುವ ಲೋಕಸಭಾ, ವಿಧಾನಸಭಾ ಉಪ ಚುನಾವಣೆಯಲ್ಲಿ ಉತ್ತಮ ಫಲಿತಾಂಶಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದಾರೆ. ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲಿಯೇ ಕೇಂದ್ರಕ್ಕೆ ರವಾನಿಸಲಾಗುವುದು ಎಂದರು.

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಬಗ್ಗೆಯೂ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಳೆದ ಒಂದೂವರೆ ವರ್ಷದಿಂದ ಮುಂದೂಡಲ್ಪಡುತ್ತಲೇ ಇದೆ. ಒಂದೆಡೆ ಸಚಿವಾಕಾಂಕ್ಷಿಗಳ ಸಂಖ್ಯೆ ಏರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹೈಕಮಾಂಡ್​ ಈವರೆಗೆ ಸಂಪುಟವನ್ನು ವಿಸ್ತರಿಸಲು ಯಡಿಯೂರಪ್ಪ ಅವರಿಗೆ ಅವಕಾಶ ನೀಡಿಲ್ಲ. ಪರಿಣಾಮ ಬಿಎಸ್​ವೈ ಪರಿಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

ಈ ನಡುವೆ ಕಳೆದ ವಾರ ಹೇಳಿಕೆ ನೀಡಿದ್ದ ವಿಧಾನ ಪರಿಷತ್​ ಸದಸ್ಯ ಆರ್​. ಶಂಕರ್​ ತಮಗೆ ಖಚಿತವಾಗಿ ಸಚಿವ ಸ್ಥಾನ ನೀಡುವುದಾಗಿ ಬಿಎಸ್​ವೈ ಮಾತು ನೀಡಿದ್ದಾರೆ ಎಂದು ತಿಳಿಸಿದ್ದರು. ಪರಿಣಾಮ ಸಂಕ್ರಾಂತಿ ಹಬ್ಬಕ್ಕೂ ಮುನ್ನವೇ ಈ ಬಾರಿ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್