NEWSನಮ್ಮರಾಜ್ಯರಾಜಕೀಯ

ಬಡ ಚಾಲಕರ ಮೂರುಕಾಸಿನ ಮೇಲೂ ಕೆಂಗಣ್ಣು ಬೀರಿದ ಸರ್ಕಾರ: ದಂಡ ರೂಪದ ಸುಲಿಗೆ ನಿಲ್ಲಿಸಲು ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ವೇಳೆ ಸಂಕಟಕ್ಕೆ ಒಳಗಾಗಿದ್ದ ಚಾಲಕರಿಗೆ 5000 ರೂ. ಕೊಡುವ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸರ್ಕಾರ ಚಾಲಕರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು, ಆದರೆ ಅನುಷ್ಠಾನಕ್ಕೆ ತರಲಿಲ್ಲ. ಚಾಲಕರಿಗೆ ಪರಿಹಾರ ಕೊಡದೆ ಮಾತು ತಪ್ಪಿದ ಸರ್ಕಾರ ಈಗ ದಂಡ ವಸೂಲಿಯ ನೆಪದಲ್ಲಿ ಚಾಲಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಕಳೆದ ಏಳು ತಿಂಗಳಿಂದ ಸಂಪಾದನೆ ಇಲ್ಲದೆ ಹತಾಶರಾಗಿರುವ ರಿಕ್ಷಾ, ಕ್ಯಾಬ್ ಚಾಲಕರಿಗೆ ದಂಡದ ರೂಪದಲ್ಲಿ ಹಗಲು ದರೋಡೆ ಮಾಡುತ್ತಿರುವ ಸರ್ಕಾರ, ಕಠಿಣ ಕ್ರಮದಿಂದ ಬಡ ಚಾಲಕರ ಮೂರುಕಾಸಿನ ಮೇಲೂ ಕೆಂಗಣ್ಣು ಬೀರಿರುವುದು ರಾಕ್ಷಸೀ ಪ್ರವೃತ್ತಿ ಎಂದು ಕಿಡಿಕಾರಿದ್ದಾರೆ.

ಬಡ ಚಾಲಕರ ಹಿಡಿಶಾಪ ಸರ್ಕಾರಕ್ಕೆ ತಗುಲುವ ಮುನ್ನವೇ ದರ್ಪ ದೌರ್ಜನ್ಯದ ಗದಾಪ್ರಹಾರ ತಕ್ಷಣವೇ ನಿಲ್ಲಿಸಬೇಕು. ಹೊತ್ತಿಉರಿಯುತ್ತಿರುವ ಮನೆಯಲ್ಲಿ ಗಳ ಹಿರಿಯುವ ಕೆಲಸ ಜವಾಬ್ದಾರಿಯುತ ಸರ್ಕಾರಕ್ಕೆ ಶೋಭೆಯಲ್ಲ. ಇಂತಹ ದುಂಡಾವರ್ತಿ ಪ್ರವೃತ್ತಿಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಸೋಂಕು ಮತ್ತು ಲಾಕ್ಡೌನ್ ಪರಿಸ್ಥಿತಿಯಿಂದ ಸಂಪಾದನೆ ಇಲ್ಲದೆ ಕಂಗೆಟ್ಟಿರುವ ಆಟೋರಿಕ್ಷಾ ಚಾಲಕರು ಹಾಗೂ ಕ್ಯಾಬ್ ಡ್ರೈವರ್ ಗಳ ಮೇಲೆ ಮುಲಾಜಿಲ್ಲದೆ ದಂಡ ವಸೂಲಿ ಮಾಡುತ್ತಿರುವ ಸಂಚಾರಿ ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಬಡ ಚಾಲಕರಿಗೆ ಬರಸಿಡಿಲು ಬಡಿದಂತಾಗಿದೆ ಎಂದು ಹೇಳಿದ್ದಾರೆ.

ಮಾಸ್ಕ್ ಧರಿಸದವರಿಗೆ ಕಾನೂನು-ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ದಂಡ ವಸೂಲಿ ದಂಧೆಗೆ ಇಳಿದಿರುವುದು ನಾಗರಿಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಜಾಗೃತಿ ಮೂಡಿಸಬೇಕಾದ ಪೊಲೀಸರು ವಾಹನ ತಪಾಸಣೆ ಹೆಸರಲ್ಲಿ ಬಡ ಚಾಲಕರನ್ನು ಸುಲಿಯುತ್ತಿರುವ ನಿರ್ದಾಕ್ಷಿಣ್ಯ ವರ್ತನೆ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲ ದಾಖಲಾತಿಗಳನ್ನು ತೋರಿಸಿದರೂ ಒಂದಲ್ಲಾ ಒಂದು ಕಾನೂನು ತಗಾದೆ ತೆಗೆದು ಚಾಲಕರನ್ನು ಹಗಲು ದರೋಡೆ ಮಾಡುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರಿಗೆ ದಂಡ ವಸೂಲಿಗೆ ಟಾರ್ಗೆಟ್ ನೀಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದಿದ್ದಾರೆ.

ಈಗಷ್ಟೇ ರಸ್ತೆಗೆ ಇಳಿದಿರುವ ಆಟೋರಿಕ್ಷಾ ಮತ್ತು ಕ್ಯಾಬ್ ಚಾಲಕರು ಪ್ರಯಾಣಿಕರ ಕೊರತೆಯಿಂದ ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಪೊಲೀಸರು ದಂಡ ವಸೂಲಿಯನ್ನೇ ಮೂಲಮಂತ್ರವಾಗಿರಿಸಿ ಕೊಂಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು ಎಂದು ಹೇಳಿದ್ದಾರೆ.

ಸರ್ಕಾರ ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ತಕ್ಷಣ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ಚಾಲಕರಿಗೆ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ. ಎಗ್ಗಿಲ್ಲದೆ ದಂಡ ವಸೂಲಿ ಮಾಡುವ ಪೊಲೀಸರ ಕ್ರಮದಿಂದ ಚಾಲಕರು ನಲುಗಿ ಹೋಗಿದ್ದಾರೆ. ಇಂತಹ ಕಡು ಕಷ್ಟಕಾಲದಲ್ಲಿ ಸರ್ಕಾರ ಮಾನವೀಯತೆಯನ್ನು ಪ್ರದರ್ಶಿಸಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ