NEWSಕೃಷಿನಮ್ಮಜಿಲ್ಲೆ

ಬಂದ್‌ಗೆ ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೈಸೂರಿನಲ್ಲಿ ಬಂದ್ ಭಾಗಶಃ ವಿಫಲವಾಗಿದೆ. ಎಂದಿನಂತೆ ಜನಜೀವನ ಆರಂಭವಾಗಿದೆ.

9 ಗಂಟೆ ನಂತರ ಬಂದ್ ಬಿಸಿ ಕಡಿಮೆಯಾಗಿದೆ. ಮೈಸೂರಿನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ. ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಯಥಾ ಪ್ರಕಾರ ನಡೆಯುತ್ತಿದೆ. ರಾಜ್ಯದ ಅನೇಕ ಕಡೆ ರೈತರ ಆಕ್ರೋಶದ ಕಿಚ್ಚು ಎಲ್ಲೆ ಮೀರಿದೆ. ಆದರೆ ಮೈಸೂರಿನಲ್ಲಿ ಪ್ರತಿಭಟನೆಯ ಕಿಚ್ಚು ಕಾಣಿಸುತ್ತಿಲ್ಲ. ಕೇವಲ ಪ್ರತಿಭಟನೆಗೆ ಮಾತ್ರ ಬಂದ್ ಸೀಮಿತವಾದಂತಿದೆ. ‍

ವಾಹನ ಸಂಚಾರ ಎಂದಿನಂತೆ ಆರಂಭವಾಗಿದೆ. ನಿತ್ಯದ ಚಟುವಟಿಕೆಗಳಿಗೆ ಯಾವುದೇ ಅಡೆತಡೆ ಇಲ್ಲ. ದೇವರಾಜು ಅರಸು ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆಗಳಲ್ಲಿ ಸಹಜ ಸ್ಥಿತಿ ಕಂಡು ಬಂದಿದೆ. ಜತೆಗೆ ಅಂಗಡಿ ಮಾಲೀಕರು ಬಾಗಿಲು ತೆರೆದು ವ್ಯಾಪಾರಕ್ಕಿಳಿದಿದ್ದಾರೆ.

ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್‌
ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು  ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ