Vijayapatha – ವಿಜಯಪಥ
Friday, November 1, 2024
NEWSಕೃಷಿನಮ್ಮರಾಜ್ಯರಾಜಕೀಯ

ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಲು ರೈತರಿಂದ ಬಾರುಕೋಲು ಚಳವಳಿ: ಸಾವಿರ ಸಾವಿರ ರೈತರ ಆಗಮನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ನಿನ್ನೆ ಭಾರತ್ ಬಂದ್ ಮಾಡಲಾಯಿತು. ಇಂದು ರಾಜಧಾನಿಯಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ‌ ಧೋರಣೆ ವಿರೋಧಿಸಿ ಅನ್ನದಾತರು ತಮ್ಮ ಬಾರುಕೋಲು ಮೂಲಕ ಚಳವಳಿ ಮಾಡಲಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿನ್ನೆ ಅನ್ನದಾತ ನೀಡಿದ ‘ಭಾರತ್ ಬಂದ್’ ಕರೆಗೆ ಓಗೊಟ್ಟು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ತಾಲೂಕು ಕೇಂದ್ರದಲ್ಲಿ ರೈತ ವಿರೋಧಿ ಮೂರು ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಪ್ರತಿಭಟನೆ ಮಾಡಲಾಯಿತು.

ಆದರೆ, ಇಂದು ಬೆಂಗಳೂರಿನಲ್ಲಿ ರೈತರ ಪ್ರಮುಖ ಅಸ್ತ್ರ ಬಾರುಕೋಲು ಝಳಪಿಸುವ ಮೂಲಕ ರಾಜ್ಯ ಸರ್ಕಾರವನ್ನು ಎಚ್ಚರಿಸಿ ಹೋರಾಟ ಮಾಡಲು ಅನ್ನದಾತರು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕರವೇ ನೇತೃತ್ವದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೆ ಪಾದಯಾತ್ರೆ ಮೂಲಕ ರೈತರು ಹೋರಾಟ ಮಾಡಲಿದ್ದಾರೆ.

ರೈತರು ಈ ದೇಶದ ಬೆನ್ನೆಲುಬು, ಅವರ ಪರಿಶ್ರಮದ ಬೆವರಿನಿಂದ ಸಿಕ್ಕ ಫಲವೇ ನಾವು ತಿಂದು ಜೀವಿಸುವ ಅನ್ನ. ಅಂತಹ ಅನ್ನದಾತನಿಗೆ ನ್ಯಾಯ ನೀಡಬೇಕಾದ ಇಂದಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಅನ್ಯಾಯವೆಸಗುತ್ತಿರುವುದು ಈ ದೇಶದ ದುರಂತ, ನಮ್ಮೆಲ್ಲರ ದುರಂತ. ಪ್ರಧಾನಿ ಮೋದಿ ಅವರು ಬಂಡವಾಳ ಶಾಹಿಗಳ ಪರವಾಗಿ ತೆಗೆದುಕೊಂಡಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣಾ ಕಾಯ್ದೆಯ ತಿದ್ದುಪಡಿ ಬಹುಶಃ ಈ ದೇಶದ ರೈತನನ್ನ ನೇಣಿಗೇರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅಂದಿನ ಪ್ರಧಾನಿ ದಿ.ಇಂದಿರಾ ಗಾಂಧಿಯವರು “ಉಳುವವನೆ ಭೂ ಒಡೆಯ” ಕಾಯ್ದೆ ಜಾರಿಗೆ ತಂದು ಬಂಡವಾಳ ಶಾಹಿಗಳ ಹೆಸರಿನಲ್ಲಿದ್ದ ಸಾವಿರ – ಸಾವಿರ ಎಕ್ಕರೆ ಜಮೀನುಗಳನ್ನು ಕಿತ್ತು ದೀನ ದಲಿತರಿಗೆ, ಹಿಂದುಳಿದ ವರ್ಗದವರಿಗೆ, ಕೂಲಿ ಕಾರ್ಮಿಕರಿಗೆ, ಬಡವರಿಗೆ ಭೂಮಿ ಕೊಟ್ಟು ಆ ವರ್ಗದ ಜನರ ಸ್ವಾವಲಂಬಿ ಬದುಕಿಗೆ ಆಶ್ರಯದಾತರಾದರು. ಆದರಿಂದು ಪ್ರಧಾನಿ ಮೋದಿ ಏನು ಮಾಡುತ್ತಿದ್ದಾರೆ, ಉಳ್ಳವನೆ ಭೂ ಒಡೆಯ ಕಾಯ್ದೆ ಮಾಡುವ ಸಲುವಾಗಿ ಗುಜರಾತ್ ಮೂಲದ ಉದ್ಯಮಿ ಅದಾನಿ, ಅಂಬಾನಿ ಹಾಗೂ ಬಂಡವಾಳ ಶಾಹಿಗಳ ಕೈಗೊಂಬೆಯಾಗಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ವಿರುದ್ಧವಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಪಾದಯಾತ್ರೆ ಯುದ್ದಕ್ಕೂ ರೈತರು ಬಾರುಕೋಲು ಬೀಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದ್ದೇವೆ ಎನ್ನುತ್ತಾರೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್.

ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದಲೂ ಬೆಳಗ್ಗೆಯೇ ಬೆಂಗಳೂರಿಗೆ ರೈತರು ಬಸ್, ರೈಲು, ವಾಹನದ ಮೂಲಕ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ರೈತರ ಪಾದಯಾತ್ರೆ ಶುರುವಾಗಲಿದೆ. ರೈತರ ಹೆಗಲ‌ ಮೇಲೆ ಹಸಿರು ಶಾಲು, ಬಲಗೈಯಲ್ಲಿ ಬಾರುಕೋಲು ಕಂಗೊಳಿಸುತ್ತಿದೆ.

ರೈಲ್ವೆ ನಿಲ್ದಾಣದಿಂದ ಆನಂದ್ ರಾವ್ ವೃತ್ತದ ಮೂಲಕ ಫ್ರೀಡಂ ಪಾರ್ಕ್, ಕೆ‌ಆರ್ ವೃತ್ತದ ಮೂಲಕ ವಿಧಾನಸೌಧದ ಮುಂದೆ ಬೃಹತ್ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಇಂದು ಸಾವಿರಾರು ಸಂಖ್ಯೆಯಲ್ಲಿ ರೈಲ್ವೆ ನಿಲ್ದಾಣಕ್ಕೆ ರೈತರು ಆಗಮಿಸುವ ಹಿನ್ನೆಲೆ ಪೊಲೀಸರು ಭಾರೀ ಬಂದೋಬಸ್ತ್ ಮಾಡಲಾಗಿದೆ.

ಮೂರುಮೂರು ಕಡೆ ಪ್ರತಿಭಟನೆ ನಡೆಯುತ್ತಿದ್ದು, ಬೆಂಗಳೂರು ರೈಲ್ವೆ ನಿಲ್ದಾಣದಿಂದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರಿಂದ, ಮೌರ್ಯ ವೃತ್ತದಿಂದ ಮತ್ತೊಬ್ಬ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಮತ್ತು ಬಿಬಿಎಂಪಿ ಕಚೇರಿ ಎದುರಿನಿಂದ ರಾಜಭವನ ಚಲೋವನ್ನು ಕರವೇ ಹಮ್ಮಿಕೊಂಡಿದ್ದು, ರೈತರ ಪರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುವ ಎಲ್ಲಾ ಲಕ್ಷಗಳು ಕಾಣಿಸುತ್ತಿವೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ