ಯಾದಗಿರಿ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 17ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಆಗಿರುವ ಪ್ರಯುಕ್ತ ಜಿಲ್ಲೆಯಲ್ಲಿ ತೆರೆಯಲಾದ 5 ಜ್ವರ ತಪಾಸಣೆ ಕೇಂದ್ರಗಳಲ್ಲಿ ಶನಿವಾರ 318 ಜನ ಸೇರಿದಂತೆ ಮೇ 9ರವರೆಗೆ ಒಟ್ಟು 28,526 ಜನರ ಜ್ವರ ತಪಾಸಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಹುಣಸಗಿ ತಾಲೂಕಿನ ಸರ್ಕಾರಿ ಬಾಲಕರ ಪ್ರೌಢಶಾಲೆ ಕೇಂದ್ರದಲ್ಲಿ ಶನಿವಾರ 81 ಜನ ಸೇರಿದಂತೆ ಒಟ್ಟು 2,631 ಜನ, ಸುರಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 31 ಸೇರಿ ಒಟ್ಟು 8,249 ಜನರನ್ನು ತಪಾಸಣೆಗೆ ಒಳಪಡಿಸಲಾಗಿತ್ತು.
ಶಹಾಪೂರ ತಾಲೂಕಿನ ಭೀಮರಾಯನಗುಡಿ ಯು.ಕೆ.ಪಿ ಆಸ್ಪತ್ರೆಯಲ್ಲಿ 63 ಸೇರಿದಂತೆ ಒಟ್ಟು 4,793 ಜನ, ಗುರುಮಠಕಲ್‍ನ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ 91 ಸೇರಿದಂತೆ ಒಟ್ಟು 3,760 ಜನ, ಯಾದಗಿರಿ ಆಯುಷ್ ಆಸ್ಪತ್ರೆಯಲ್ಲಿ 52 ಸೇರಿದಂತೆ ಒಟ್ಟು 9,093 ಜನರ ಜ್ವರ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail