NEWSನಮ್ಮರಾಜ್ಯರಾಜಕೀಯ

ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸಚಿವ ಸುಧಾಕರ್‌ ಹಠಾತ್ ಭೇಟಿ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬುಧವಾರ ಸಂಭವಿಸಿದ ಬೆಂಕಿ ಅವಘಡದ ಸ್ಥಳಕ್ಕೆ ಗುರುವಾರ ಬೆಳಗ್ಗೆ ಆರೋಗ್ಯ ಸಚಿವ ಕೆ. ಸುಧಾಕರ್‌ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿಸ ಅವರು, ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಅಕ್ರಮವಾಗಿ ಸ್ಯಾನಿಟೈಸರ್ ಉತ್ಪಾದನೆ ಮತ್ತು ಗೋದಾಮು ನಡೆಸಲಾಗುತ್ತಿತ್ತು ಎಂಬ ದೂರುಗಳಿದ್ದು, ಈಗಾಗಲೇ ಕಂಪನಿಯ ಮಾಲೀಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಇನ್ನು ಜನದಟ್ಟಣೆ ಇರುವ ವಸತಿ ಪ್ರದೇಶದಲ್ಲಿ ಕಾನೂನು ಉಲಂಘಿಸಿ ಕಾರ್ಖಾನೆ ಮತ್ತು ಗೋದಾಮು ನಡೆಸುತ್ತಿರುವುದು ತನಿಖೆಯಲ್ಲಿ ಸಾಬೀತಾದಲ್ಲಿ, ಈ ಕಂಪನಿಯಿಂದ ಖರೀದಿ ಮಾಡುತ್ತಿದ್ದ ಇತರೆ ದೊಡ್ಡ ಕಂಪನಿಗಳೂ ಸೇರಿದಂತೆ ಎಲ್ಲಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅವಘಡದಿಂದ ಉಂಟಾಗಿರುವ ಸಾರ್ವಜನಿಕರ ಆಸ್ತಿ-ಪಾಸ್ತಿ ನಷ್ಟವನ್ನು ಬಿಬಿಎಂಪಿ ಜಂಟಿ ಆಯುಕ್ತರು ಅಂದಾಜು ಮಾಡಿ ವರದಿ ಸಲ್ಲಿಸಿದ ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?