Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಗ್ರಾಪಂಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣರಿಂದ ಅನುದಾನದ ಆಮಿಷ: ಆಪ್‌ನಿಂದ ಆಯೋಗಕ್ಕೆ ದೂರು ನೀಡಲು ಸಿದ್ಧತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 1.50 ಕೋಟಿ ರೂ. ಅನುದಾನವನ್ನು ನೇರವಾಗಿ ನೀಡಲಾಗುವುದು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರಿಗೆ ಚುನಾವಣೆ ಘೋಷಣೆಯಾಗಿರುವ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇಎಂದು ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಕಿಡಿಕಾರಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿಗೆ ಅನುದಾನ ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಚುನಾವಣೆ ನೀತಿಸಂಹಿತೆ ಜಾರಿಯಾದ ನಂತರ ಹೇಳಿಕೆ ನೀಡಿದ್ದು, ನೀವು ನೀತಿಸಂಹಿತೆಯನ್ನು ಉಲ್ಲಂಘನೆ ಮಾಡಿದ್ದೀರಿ ಈ ಬಗ್ಗೆ ನಾಳೆ (ಶುಕ್ರವಾರ ) ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಹೇಳಿದರು.

ಇಷ್ಟು ದಿನ ಗ್ರಾಮಗಳ ಬಗ್ಗೆ ಮಾತನ್ನೇ ಆಡದ ನೀವು ಈಗ “ಗ್ರಾಮ ಸ್ವರಾಜ್ಯ” ಎನ್ನುವ ಮೂಲಕ ಮಹಾತ್ಮ ಗಾಂಧೀಜಿಯವರ ಆಶಯಗಳಿಗೆ ಮಸಿ ಬಳಿಯುತ್ತಿದ್ದೀರಿ. ಚುನಾವಣೆ ಹೊತ್ತಿನಲ್ಲೇ ನಿಮಗೆ ಗ್ರಾಮಗಳ ನೆಪಪಾದವೇ? ಇಷ್ಟು ದಿನ ನಾಪತ್ತೆಯಾಗಿದ್ದ ನೀವು ದಿಢೀರ್ ಎಂದು ಪ್ರತ್ಯಕ್ಷವಾಗಿ ಸುಮ್ಮನೆ ಬಡಬಡಾಯಿಸುವುದನ್ನು ನಿಲ್ಲಿಸಿ ಎಂದು ಹೇಳಿದರು.

ಈ ಮೊದಲು ಕರ್ನಾಟಕದಲ್ಲಿ 5 ವರ್ಷ ಸರ್ಕಾರ ನಡೆಸಿದ ನಿಮ್ಮ ಕೊಡುಗೆ ಗ್ರಾಮಗಳ ಉದ್ಧಾರಕ್ಕೆ ಏನಿದೆ ಎಂಬುದನ್ನು ತಿಳಿಸಿ ಹಾಗೂ ಕಳೆದ ಒಂದು ವರ್ಷದಿಂದ ಒಂದೇ ಒಂದು ಹಳ್ಳಿಯನ್ನು ಉದ್ಧಾರ ಮಾಡಿದ್ದೀರಾ ಎಂಬುದನ್ನು ತೋರಿಸಿ. ಆನಂತರ ಈ ಯೋಜನೆ ಪ್ರಕಟಿಸಿ ಎಂದರು.

ವಸಂತ್ ನಗರ ವಾರ್ಡ್ ಅಧ್ಯಕ್ಷೆ ಜನನಿ ಭರತ್ ಮಾತನಾಡಿ, ಜನಿಸಿದ ಹಳ್ಳಿಯನ್ನೇ ಉದ್ಧಾರ ಮಾಡದ ನೀವು ಇನ್ನೂ ಕರ್ನಾಟಕದ ಸಾವಿರಾರು ಹಳ್ಳಿಗಳನ್ನು ಉದ್ಧಾರ ಮಾಡುತ್ತೇನೆ ಎಂದು ಹೇಳಿರುವುದು ಹಾಸ್ಯಾಸ್ಪದ. ನಿಮ್ಮ ಜನ್ಮಸ್ಥಳವನ್ನು ಮಾದರಿ ಗ್ರಾಮವನ್ನಾಗಿ ಮಾಡಿ ಆನಂತರ ಇಡೀ ರಾಜ್ಯದ ಹಳ್ಳಿಗಳ ಅಭಿವೃದ್ಧಿ ಬಗ್ಗೆ ಮಾತನಾಡಲು ಯೋಗ್ಯತೆ ಬರುತ್ತದೆ ಎಂದ ಅವರು, ಗ್ರಾಮ ಪಂಚಾಯಿತಿಗಳಿಗೆ ದುಡ್ಡುಕೊಟ್ಟು ದೇಶದ ತಳಮಟ್ಟದಿಂದಲೇ ಭ್ರಷ್ಟಾಚಾರವನ್ನು ಹಬ್ಬಿಸುವ ನಿಮ್ಮ ಈ ನೀಚ ಬುದ್ಧಿಯನ್ನು ಬಿಡಬೇಕು ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ