NEWSನಮ್ಮರಾಜ್ಯರಾಜಕೀಯ

ಕೋರಮಂಗಲ ಮೇಲ್ಸೇತುವೆಗಾಗಿ ಟೀ, ಪಕೋಡ ಮಾರಿ ಬಿಬಿಎಂಪಿಗೆ ದೇಣಿಗೆ: ಆಮ್ ಆದ್ಮಿ ಪಕ್ಷದಿಂದ ವಿನೂತನ ಪ್ರತಿಭಟನೆ

ಪ್ರತಿಭಟನಾಕಾರರ ಬಂಧಿಸಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಕೋರಮಂಗಲ ಮೇಲ್ಸೇತುವೆ ಕಾಮಗಾರಿ ಶೀಘ್ರ ಮುಗಿಸುವಂತೆ ಆಗ್ರಹಿಸಿ ಟೀ, ಪಕೋಡ ಹಾಗೂ ಟಿಕೆಟ್ ಮಾರುವ ಮೂಲಕ ಕೋರಮಂಗಲ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಸದಸ್ಯರು ನಿವಾಸಿಗಳು ಹಾಗೂ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಸೋನಿ ವರ್ಲ್ಡ್ ವೃತ್ತದ ಬಳಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ನಗರದ ಅತಿ ದೊಡ್ಡ ಎರಡನೇ ಮೇಲ್ಸೇತುವೆ ಎಂದು ಮಂಕುಬೂದಿ ಎರಚಿ ಪ್ರಾರಂಭಿಸಿದ ಕೋರಂಮಗಲ ಎಲಿವೇಟೆಡ್ ಮೇಲ್ಸೇತುವೆ ಕಾಮಗಾರಿ 4 ವರ್ಷ ಕಳೆದರೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ ಆದ ಕಾರಣ ಇದನ್ನು ಬೃಹತ್ ಬೆಂಗಳೂರಿನ ಬೃಹತ್ ಭ್ರಷ್ಟಾಚಾರದ ಸ್ಮಾರಕವಾಗಿ ಘೋಷಿಸಲಾಗುತ್ತಿದೆ ಎಂದು ಹೇಳಿದರು.

ಕೋರಮಂಗಲ 100 ಅಡಿ ಮುಖ್ಯರಸ್ತೆಯಿಂದ ಈಜೀಪುರ ಮುಖ್ಯರಸ್ತೆ – ಒಳವರ್ತುಲ ರಸ್ತೆ ಜಂಕ್ಷನಿಂದ ಕೇಂದ್ರಿಯ ಸದನ ಜಂಕ್ಷನ್ ತನಕ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು 2.4 ಕಿಮೀ ಉದ್ದವಿದೆ. ನಗರೋಥ್ಥಾನ ಯೋಜನೆ ಅಡಿ 203.20 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಮೇಲ್ಸೇತುವೆ ಕಾಮಗಾರಿಯನ್ನು 2017 ಜುಲೈ ಉದ್ಘಾಟಿಸಲಾಯಿತು.  2019 ಕ್ಕೆ ಮುಗಿಯಬೇಕಾದ ಕಾಮಗಾರಿ ಇನ್ನೂ ಮುಗಿದಿಲ್ಲ. 203 ಕೋಟಿ ರೂ.ಗಳಲ್ಲಿ ಎಷ್ಟು ಖರ್ಚಾಗಿದೆ ಎಂಬುದು ಯಾರ ಬಳಿಯೂ ಮಾಹಿತಿ ಇಲ್ಲ, ಬೇಕಾದಾಗ ಬಂದು ಏನು ಬೇಕಾದರೂ ತಿಂದು ಹೋಗಲು ಇದು ಮಾವನ ಮನೆಯೇ ಎಂದು ಪ್ರಶ್ನಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಬೃಹತ್ ಭ್ರಷ್ಟಾಚಾರದ ಸ್ಮಾರಕಗಳ ಬಳಿ ಟೀ ಅಂಗಡಿ, ಪಕೋಡ ಹಾಗೂ ಸ್ಮಾರಕ ವೀಕ್ಷಿಸಲು ಟಿಕೆಟ್ ಮಾರಾಟ ಮಾಡಿ ಆ ಹಣವನ್ನು ಕಾಮಗಾರಿ ನಿಧಿಗೆ ಕೊಡಲಾಗುವುದು ಎಂದರು.

ಕೋರಮಂಗಲದ ನಿವಾಸಿಗಳು ದಿನನಿತ್ಯ ಸಂಚಾರ ದಟ್ಟಣೆಯಿಂದ ನರಕ ಅನುಭವಿಸುತ್ತಿದ್ದಾರೆ. ಸ್ಥಳೀಯ ಶಾಸಕ ರಾಮಲಿಂಗಾರೆಡ್ಡಿ ಮಾಧ್ಯಮಗಳ ಮುಂದೆ ಆಗಾಗ ಕಾಣಿಸಿಕೊಂಡು ಬಾಯಿ ಚಪಲದ ಮಾತುಗಳನ್ನಾಡುತ್ತಿದ್ದಾರೆ ಹೊರತು ಕಾಮಗಾರಿ ಮುಗಿಸಲು ಒತ್ತಡ ಹಾಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಮಾಧ್ಯಮ‌ ಸಂಚಾಲಕ ಜಗದೀಶ್ ವಿ. ಸದಂ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಕೋರಮಂಗಲ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು, ಸ್ಥಳೀಯ ನಿವಾಸಿಗಳು ಭಾಗವಹಿಸಿದ್ದರು.

ಪ್ರತಿಭಟನೆ ನಡೆಸುತ್ತಿದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್