ಬೆಂಗಳೂರು: ಶೋಷಿತ, ಹಿಂದುಳಿದ ವರ್ಗಗಳ ಧ್ವನಿಯಾಗಿ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದಂದು ಅವರ ಕಾರ್ಯಸಾಧನೆಗಳನ್ನು ನೆನೆದು ಮಾದರಿಯಾಗಿಸಿಕೊಳ್ಳೋಣ ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೆಗೌಡ ಹೇಳಿದ್ದಾರೆ.
ಡಿ. ದೇವರಾಜ ಅರಸು ಜನ್ಮದಿನ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಅರಸರು ಮುಖ್ಯಮಂತ್ರಿ ಆಗಿದ್ದಾಗ ನಾನು ಪ್ರತಿಪಕ್ಷದ ನಾಯಕನಾಗಿದ್ದೆ. ಅಂದಿನ ಮೌಲ್ಯಾಧಾರಿತ ರಾಜಕಾರಣ ಇಂದು ಕಾಣುವುದು ಕಷ್ಟ ಎಂದು ಹೇಳಿಕೊಂಡಿದ್ದಾರೆ.