NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯಗಳ ಆರ್ಥಿಕತೆಗೆ ಕೊಳ್ಳಿ ಇಟ್ಟ ಕೇಂದ್ರ ಸರ್ಕಾರ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಾಳ ತಪ್ಪಿದ ಕೇಂದ್ರ ಸರ್ಕಾರದ ದಿಕ್ಕೆಟ್ಟ ಅರ್ಥವ್ಯವಸ್ಥೆ ಮತ್ತು ಮುನ್ನೋಟದ ಅಂದಾಜು ಗ್ರಹಿಸದ ವೈಫಲ್ಯದ ಫಲವಾಗಿ ರಾಜ್ಯ ಸರ್ಕಾರಗಳು ಹಗ್ಗ ಕೊಟ್ಟು ಕೈ ಕಟ್ಟಿಸಿಕೊಂಡ ಪರಿಸ್ಥಿತಿಗೆ ಸಿಲುಕಿ ನಲುಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ರಾಜ್ಯಗಳಿಗೆ ಸಾಲ ಕೊಡಿಸುವ ಬದಲು ಕೇಂದ್ರವೇ  RBIನಿಂದ ಸಾಲ ಪಡೆದು ರಾಜ್ಯಗಳಿಗೆ ನಷ್ಟ ಪರಿಹಾರ ತುಂಬಿ ಕೊಡಲಿ ಎಂದು ಆಗ್ರಹಿಸಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)  ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ  ಹೊಣೆಗೇಡಿತನ ಪ್ರದರ್ಶಿಸಿರುವುದು  ತೀವ್ರ ಖಂಡನೀಯ ಎಂದಿದ್ದಾರೆ.

ಕೊರೊನಾ ಸಂಕಷ್ಟ ‘ದೇವರ ಅಸಮಾನ್ಯ ಆಟ’ ಎನ್ನುವ ಮೂಲಕ  ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ  ನಂಬಿಕೆಗೆ ಕೊಡಲಿಪೆಟ್ಟು ಕೊಟ್ಟಿದೆ. ಸುಲಭದ ಬಡ್ಡಿದರದಲ್ಲಿ ಸಾಲ ತೆಗೆದುಕೊಳ್ಳಿ. ಪಡೆದ ಸಾಲವನ್ನು ರಾಜ್ಯಗಳೇ ತೀರಿಸಿ ಎನ್ನುವ ಆಯ್ಕೆ ಮುಂದಿಟ್ಟು  ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರ್ಕಾರ ‘ಕೊಳ್ಳಿ’ ಇಟ್ಟಿದೆ ಎಂದು ಕಿಡಿಕಾರಿದ್ದಾರೆ.

ಯಾವುದೇ ಪ್ರಲೋಭನೆ ಒಡ್ಡುವ ಮೂಲಕ ರಾಜ್ಯಗಳ ಆರ್ಥಿಕತೆಯ ವ್ಯವಸ್ಥೆ ಮೇಲೆ ನಿಯಂತ್ರಣ ಸಾಧಿಸುವ  ಕಾನೂನು, ತಿದ್ದುಪಡಿ ಮಸೂದೆಗಳು ಭವಿಷ್ಯದಲ್ಲಿ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಅಪಾಯ ಇಲ್ಲದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಇಂತಹದೊಂದು ಅಪಾಯ ಈಗ ಎದುರಾಗಿದೆ ಎಂದು ಹೇಳಿದ್ದಾರೆ.

ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋಟಿ ರೂ. ಹಾಗೂ ಆದಾಯ ಕೊರತೆ ಎದುರಾಗಲಿರುವ  2.35 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಟ್ಟಿದೆ ಇದು ಸರಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು? ಕೋವಿಡ್ 19  ಮತ್ತು ನೆರೆಯಿಂದ ಬಳಲಿರುವ  ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿವೆ. ಇನ್ನಾದರೂ ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

1 Comment

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?