NEWSದೇಶ-ವಿದೇಶರಾಜಕೀಯಸಂಸ್ಕೃತಿ

ಹಿಂದಿ ಹೇರಿಕೆ ಹುನ್ನಾರ- ತ.ನಾಡು ಸಂಸದೆಗೆ ಭಾಷಾಪಮಾನ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಭಾಷೆ ಕಾರಣಕ್ಕೆ ತಮಿಳುನಾಡುನ DMK ಪಕ್ಷದ ಅರಿವಲಯಂ ಕ್ಷೇತ್ರದ ಸಂಸದೆ ಕನಿಮೋಳಿ ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಎಚ್‌.ಡಿ.ದೇವೇಗೌಡ, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಹಿಂದಿ ಹೇರಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದು ಸಂಸದರು ಅನುಭವಿಸುತ್ತಿರುವ ನೋವನ್ನು ಬಿಚ್ಚಿಟ್ಟಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ IBPSmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಸರಣಿ ಟ್ವೀಟ್‌ ಮೂಲಕ ಬಹಿರಂಗಪಡಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ