NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಎಚ್‌ಡಿಕೆ-ಸಿಎಂ ಬಿಎಸ್‌ವೈ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಂಡು ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ  ಬಂದು ಒಂದು ವರ್ಷ ಬಳಿಕ ಇದೇ ಮೊದಲ‌ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ‌ ಮೂಡಿಸಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ‌ ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದ್ದು, ಪಕ್ಷದ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ತುಂಬ ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ 515 ಕೋಟಿ ರೂ. ಯೋಜನೆಗೆ ಅನುಮೋದನೆ ಕೊಟ್ಟಿದ್ದೆ.ಆದರೆ ಈಗಿನ ಸರ್ಕಾರ ಕೇವಲ 16 ಕೋಟಿ‌‌ ರೂ. ಮಾತ್ರ ನೀಡಿದೆ. ಹೀಗಾಗಿ ಮಳೆ ಅನಾಹುತ ನಿರ್ವಹಣೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

ಸಿಎಂ ಬಿಎಸ್‌ವೈ ಮಾತನಾಡಿ, ಜೆಡಿಎಸ್‌ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿ ಮಳೆಯಿಂದ ತುಂಬ ಹಾನಿ ಆಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ನೀಡಿರುವ ಹಣ ಸಾಲದು. ಹೀಗಾಗಿ ಮಳೆ ಅನಾಹುತ ನಿರ್ವಹಣೆ ಇನ್ನಷ್ಟು ಅಗತ್ಯ ನೆರವು ನೀಡುವಂತೆ ಎಚ್‌ಡಿಕೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಎಚ್‌ಡಿಕೆ ಮತ್ತ ತಮ್ಮ ಭೇಟಿಬಗ್ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅವರು ಮಳೆಯಿಂದ ಆಗಿರುವ ಹಾನಿಗೆ ಸೂಕ್ತ ನೆರವು ನೀಡುವಂತೆ ಕೇಳಲು ಬಂದಿದ್ದರಷ್ಟೆ ಎಂದು ವಿವರಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?