NEWSನಮ್ಮರಾಜ್ಯರಾಜಕೀಯ

ತಮ್ಮ ಹಿನ್ನೆಲೆ ಪ್ರಶ್ನೆ: ಸಚಿವ ಸುಧಾಕರ್‌ ವಿರುದ್ಧ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಮ್ಮ ಹಿನ್ನೆಲೆ ಬಗ್ಗೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಕಿಡಿಕಾರಿದ್ದಾರೆ.

ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣ ಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆಂದು ಇಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸುಧಾಕರ್‌ ವಿರುದ್ಧ ಕಿಡಿಕಾರಿದರು.

ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ. ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ತಿರುಗೇಟು ನೀಡಿದರು.

ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ ಎಂದು ಕುಮಾರಸ್ವಾಮಿ ಹೇಳಿದರು.

ಕಳೆದ 2 ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆಂಬ ಹಿನ್ನೆಲೆ ಬಗ್ಗೆ ನಾನು ಮಾತನಾಡಲಾರೆ. ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚನೆಗೊಂಡು ಸರ್ಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ, ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದು ಟ್ವೀಟ್‌ ಕೂಡ ಮಾಡಿ ಜಾಡಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ