NEWSರಾಜಕೀಯಸಂಸ್ಕೃತಿ

ಒಳಮೀಸಲಾತಿ ವಿಚಾರ: ತುಟಿಗೆ ತುಪ್ಪ ಸವರುವ ನೀತಿ ಇನ್ನಾದರೂ ಬಿಡಿ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಿಶಿಷ್ಟಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಒಳಮೀಸಲಾತಿ “ಸರ್ವರಿಗೂ ಸಮಪಾಲು ಸಮಬಾಳು” ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ  ರಾಜ್ಯ ಸರ್ಕಾರ  ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ತುಳಿತಕ್ಕೊಳಗಾದ ಎಲ್ಲಾ  ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ  ಪರಿಪಾಲನೆಯ ಕರ್ತವ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಮೇಲ್ಜಾತಿಯಲ್ಲಿನ ಬಡವರಿಗೆ  ಶೇ. 10 ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶ ವಂಚಿತರಿಗೆ  ಒಳಮೀಸಲಾತಿ ಜಾರಿಗೆ ತರಬಾರದೇಕೆ ಎಂದು ಪ್ರಶ್ನಿಸಿದ್ದಾರೆ.

ಸ್ವತಃ ಹಿಂದುಳಿದವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ  ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ ಎಂದು ವಿವರಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...