Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಎಚ್‌ಡಿಕೆ ಎಚ್ಚರಿಕೆ: ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಮಕ್ಕಳು, ಶಿಕ್ಷಕರ ಮಾರಣಹೋಮಕ್ಕೆ ನಾಂದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ.. ಹುಷಾರ್…!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶಾಲಾ-ಕಾಲೇಜುಗಳ ಆರಂಭಕ್ಕೆ ಶಿಕ್ಷಕ ಸಮುದಾಯ, ಶಾಲಾಭಿವೃದ್ಧಿ ಉಸ್ತುವಾರಿ ಸಮಿತಿ(ಎಸ್‍ಡಿಎಂಸಿ) ಹಾಗೂ ಪೋಷಕರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿರುವುದೇನೋ ಸರಿ. ಆದರೆ, ಅತಿರೇಕದ ನಿರ್ಧಾರ ಅನಾಹುತಕ್ಕೆ ದಾರಿಯಾಗುತ್ತದೆ ಎಚ್ಚರ ಎಂದು ಹೇಳಿದ್ದಾರೆ.

ನೆರೆಯ ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾದ ಮೂರೇ ದಿನದಲ್ಲಿ 260ಕ್ಕೂ ಹೆಚ್ಚು ಮಕ್ಕಳು ಹಾಗೂ 160ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ವರದಿ ತೀವ್ರ ಆತಂಕಕಾರಿ ಬೆಳವಣಿಗೆ. ಇದು ರಾಜ್ಯದಲ್ಲಿ ಪೋಷಕರ ಜಂಘಾಬಲವನ್ನೇ ಉಡುಗಿಸಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲಿ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯದ ಪ್ರಾಣದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ನಾಗರಿಕ ಸಮಾಜ ಒಪ್ಪದು.
ಈ ಹಿಂದೆಯೇ ಸರ್ಕಾರಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂದು ಸಲಹೆ ನೀಡಿದ್ದೆ ಎಂದು ನೆನಪಿಸಿದ್ದಾರೆ.

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಮತ್ತೊಮ್ಮೆ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ