ಬೆಂಗಳೂರು: ಶಿರಾ ಉಪಚುನಾವಣೆ ಫಲಿತಾಂಶ ಬರುವುದಕ್ಕೆ ಮೂರು ದಿನ ಮುನ್ನವೆ ಕುಂಚಿಟಿಗ ಒಕ್ಕಲಿಗ ಸಮುದಾಯದ ನಂಜಾವಧೂತ ಸ್ವಾಮೀಜಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮೂರು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಡಿತರು ಉಪಚುನಾವಣೆ ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬೆನ್ನಲ್ಲೇ ಶ್ರೀಗಳು ಕುಮಾರಸ್ವಾಮಿ ಕುಶಲೋಪರಿ ವಿಚಾರಿಸಿದ್ದಾರೆ ಇದು ರಾಜಕೀಯ ನಾಕರ ವಿಚಾರದಲ್ಲಿ ಕುತೂಹಲ ಮೂಡಿಸಿದೆ.
ಸ್ವಾಮೀಜಿ ಉಪಚುನಾವಣೆಯಲ್ಲಿ ಮತ ಚಲಾಯಿಸಿಲ್ಲ ಹೀಗಿದ್ದರೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಹಾನುಭೂತಿ ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕುಂಚಿಟಿಗ ಒಕ್ಕಲಿಗ ಸಮುದಾಯದ ಮತದಾರರು ದಿವಂಗತ ಸತ್ಯನಾರಾಯಣ ಅವರನ್ನು ಬೆಂಬಲಿಸಿದ್ದರು. ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಜೆಡಿಎಸ್ ನಿಂದ ಕಣಕ್ಕಿಳಿಸಲಾಗಿದ್ದು, ಫಲಿತಾಂಶಕ್ಕೆ ಕಾಯುತ್ತಿದ್ದಾರೆ.
ಶ್ರೀಗಳು ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ನಿಖಿಲ್ ಕುಮಾರ್, ಪತ್ನಿ ರೇವತಿ ಮತ್ತು ಅನಿತಾ ಕುಮಾರಸ್ವಾಮಿ ಇದ್ದರು.