ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ನ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವೀಟ್ ಮಾಡಿದ್ದು “ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ” ಎಂದು ಹಾರೈಸಿ ಸಚಿವರು ಟ್ವೀಟ್ ಮಾಡಿದ್ದಾರೆ.
ಜೆಡಿಎಸ್ ಪಕ್ಷದ ನಾಯಕರು, ಮಾಜಿ ಸಚಿವರಾದ ಶ್ರೀ @HdRevanna ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ರೇವಣ್ಣ ಅವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ.#GetWellSoon
— B Sriramulu (@sriramulubjp) August 28, 2020
ವಿಷಯ ತಿಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜನಪ್ರಿಯ ಶಾಸಕರು, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜನಪ್ರಿಯ ಶಾಸಕರು, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮತ್ತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ.@JanataDal_S
— B.S. Yediyurappa (@BSYBJP) August 28, 2020