ಕಾಂಗ್ರೆಸ್, ಸಿದ್ದರಾಮಯ್ಯ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ್ರು
ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ವಾಗ್ದಾಳಿ ನಡೆಸುತ್ತಿರುವುದಕ್ಕೆ ಆಕ್ರೋಶ
- ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: “ರಾಜಕಾರಣದಲ್ಲಿ ಸೋಲು ಗೆಲುವು ಮಾಲೂಲಿ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಸಹ ತೆನೆ ಹೊತ್ತ ಮಹಿಳೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮೇಲೆ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಇಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಅದರಲ್ಲೂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ದೇವೇಗೌಡ ಅವರು, ದೇವೇಗೌಡ ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ” ಎಂದು ಕಿಡಿಕಾರಿದರು. ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರು ಜೆಡಿಎಸ್ ವಿರುದ್ಧ ಕಿಡಿಕಾರುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್ ಎಂದು ವಾಗ್ದಾಳಿ ನಡೆಸುತ್ತಿರುವುದು ಆಕ್ರೋಶ ವ್ಯಕ್ತಪಡಿಸಿದರು.
“ತೆನೆ ಹೊತ್ತ ಮಹಿಳೆ ಬಗ್ಗೆ ಈ ರೀತಿ ಮಾತಾನಾಡುವುದು ಸರಿಯಲ್ಲ. ಜೆಡಿಎಸ್ ಪಕ್ಷವನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಸೋಲು ಗೆಲುವು ಮಾಮೂಲಿ. ನಾನು ಕಾಂಗ್ರೆಸ್ ಬಗ್ಗೆ ಮಾತಾಡಿದ್ರೆ ತುಂಬಾ ಮಾತಾಡ್ತೀನಿ. ಕಾಂಗ್ರೆಸ್ ಬಗ್ಗೆ ನಂಗೆ ಗೊತ್ತಿದೆ. ನಮ್ಮ ಪಕ್ಷದ ಬಗ್ಗೆ ಮಾತಡೊರಿಗೆ ಹೇಳುತ್ತೇನೆ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ. ಇದನ್ನು ಹೀಗೆ ಮುಂದುವರಿಸಿದರೆ ಮುಂದಿನ ಪರಿಣಾಮ ಎದುರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜೆಡಿಎಸ್ಗೆ ಯಾರಿಂದಲು ಏನೂ ಮಾಡೋಕೂ ಆಗಲ್ಲ. ಜೆಡಿಎಸ್ ನಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಮಾತ್ರ ಅಲ್ಲ. ಪಕ್ಷವನ್ನು ಮುನ್ನಡೆಸಲು ಇನ್ನು ಅನೇಕ ನಾಯಕರು ಇದ್ದಾರೆ. ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ರಿ ಏನಾಯ್ತು? ಹಾಗಾದ್ರೆ 130 ಸೀಟು ಇದ್ದದ್ದೂ 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು ನಗರಸಭೆ ಚುನಾವಣೆ ಗೆಲ್ಲೋಕೆ ಆಗಲಿಲ್ಲ, ಇದು ಆನಂದವಾ ನಿಮಗೆ?. ಎಲ್ಲದಕ್ಕೂ ತೆರೆ ಎಳೆಯುತ್ತಿದ್ದೇನೆ ಎಂದು ಗುಡುಗಿದರು.
ವಿಜಯಪಥ ಹೊಸ ಆಪ್ ಬಿಡುಗಡೆಮಾಡಲಾಗಿದೆ ಎಲ್ಲರೂ ಡೌನ್ಲೋಡ್ ಮಾಡಿಕೊಂಡು ನಿಮ್ಮ ಊರಿನ ಮತ್ತು ಇಷ್ಟವಾದ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/details?id=manyathy.vijayapatha.app
ಜೆಡಿಎಸ್ ಮನೆ ಅಲುಗಾಡಿಸಲು ಸಾಧ್ಯವಿಲ್ಲ. ಈತರ ಮಾತನಾಡಿ ಯಾವಾಗ್ಯಾವಾಗ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದ್ರು ಅಂತಾ ಗೊತ್ತಿದೆ. ಸಿದ್ದು, ಖರ್ಗೆ, ಮುನಿಯಪ್ಪ, ಗುಲಾಂ ನಬಿ ಎಲ್ಲಾರು ಬಂದಿದ್ದು ಏಕೆ? ಮಾತನಾಡುವಾಗ ಕಿಂಚಿತ್ತಾದ್ರೂ ವಾಸ್ತವ ಘಟನೆ ಬಗ್ಗೆ ಮಾತನಾಡಬೇಕು. ಜೆಡಿಎಸ್ ಪಕ್ಷ ನನ್ನಿಂದಾನೇ ಉಳಿಯಬೇಕಾ, ಪಕ್ಷದಲ್ಲಿ ಇನ್ನೂ ಇದ್ದಾರೆ” ಎಂದು ಕಿಡಿಕಾರಿದ್ದಾರೆ.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಗಲಾಟೆ ಕುರಿತು ಮಾತನಾಡಿ, ಕಾಂಗ್ರೆಸ್ ನವರು ನನ್ನ ಟೆಸ್ಟ್ ಮಾಡ್ತಾರೆ. ಜೀವನದಲ್ಲಿ ಹೋರಾಟ ಮಾಡಿ ಈ ಹಂತಕ್ಕೆ ಬಂದಿದ್ದೇನೆ. ಕಾಂಗ್ರೆಸ್ ನಡವಳಿಕೆ ಗೊತ್ತಿದೆ ನಂಗೆ. ಸಾಫ್ಟ್ ಹಿಂದುತ್ವ ಅಂತ ಗುಜರಾತ್ ಎಂಪಿಗಳು ಹೇಳ್ತಾರೆ. ಕಾಂಗ್ರೆಸ್ ನ ಸಾಫ್ಟ್, ಹಾರ್ಡ್ ಹಿಂದುತ್ವ ಗೊತ್ತಿಲ್ಲ ನಮಗೆ ಇದೆಲ್ಲಾ ಕಾಂಗ್ರೆಸ್ ನ ನಾಟಕ. ಹೊರಟ್ಟಿ ಸೀನಿಯರ್ ಲೀಡರ್, ಅವ್ರನ್ನ ಮುಂದಿಟ್ಟುಕೊಂಡು ಆಟ ಆಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮೇಲ್ಮನೆ ಸಭಾಪತಿ ಅವರೇ ರಾಜೀನಾಮೆ ಕೊಡಲು ಸಿದ್ದವಿದ್ದರು. ಆದರೆ, ಅವರ ಪಕ್ಷದವರೇ ಕೊಡಬೇಡಿ ಅಂತ ಹೇಳಿದ್ದಾರೆ. ನನ್ನ ಸೆಕ್ಯೂಲರ್ ಚೇಕ್ ಮಾಡಬೇಕ ನೀವು? ಪಾಪ ಸಭಾಪತಿ ಈಗ ರಾಜೀನಾಮೆ ಕೊಟ್ಟು ಹೋಗಿದ್ದಾರೆ. ನನ್ನ ಟೆಸ್ಟ್ ಮಾಡೋಕೆ ಈ ನಾಟಕ ಮಾಡಿದ್ದಾರೆ. ಗೋದ್ರಾ ಘಟನೆ ನಡೆದಾಗ ನಾನು ಗುಜರಾತ್ ಗೆ ಹೋಗಿದ್ದೆ ಇವರಲ್ಲಿ ಯಾರು ಹೋಗಿದ್ದರು ಎಂದು ಪ್ರಶ್ನಿಸಿದರು.
Related
You Might Also Like
ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ 2025ರ ಜನವರಿ 6ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆಯ ನಿರ್ದೇಶಕರು (ಸಿ&ಜಾ)...
ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ
ಬೆಂಗಳೂರು: ಕಾರ್ಮಿಕರು ಒಗ್ಗಟ್ಟಿಲ್ಲದೆ ಮುಷ್ಕರ ಆಗೋದಿಲ್ಲ ಎಂಬುದಕ್ಕೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಡಿ.31ರ ಮುಷ್ಕರ ಮುಂದೂಡಿರುವುದೇ ನಿದರ್ಶನವಾಗಿದೆ. ಇನ್ನು ಸಾರಿಗೆ ನೌಕರರ...
KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ...
ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಇದೇ ಡಿ.31ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ...
KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ?
ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ...
NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಒಕ್ಕೂಟದ ಪದಾಧಿಕಾರಿಗಳು ಹುಬ್ಬಳ್ಳಿಯ ನಗರ ಸಾರಿಗೆ ಘಟಕ 1, ಗ್ರಾಮಾಂತರ ಘಟಕ 1, ಗ್ರಾಮಾಂತರ ಘಟಕ...
NWKRTC: ಬಸ್-ಕಾರು ನಡುವೆ ಅಪಘಾತ – ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ
ಚಿಕ್ಕೋಡಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತೊಟ್ಟಿದ್ದು, ಕಾರು ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಪ್ರಾಣಾಪಾಯದಿಂದ...
ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ
ಬನ್ನೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ...
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...