NEWSರಾಜಕೀಯಶಿಕ್ಷಣ-

ರಾಜಕೀಯ ಪಾಠ ಕಲಿಸಿದ ಗುರು ಎಜಿಆರ್‌ ನೆನೆದ ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಿಕ್ಷಕರ ದಿನಾಚರಣೆ ನಿಮಿತ್ತ ನೆಚ್ಚಿನ ಗುರುಗಳ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು,  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ಕೋರಿದ್ದಾರೆ.

ತಮ್ಮ ಮುಂದಿನ‌ ತಲೆಮಾರಾಗಿರುವ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು ಸಮಸ್ತ ಶಿಕ್ಷಕರಿಗೆ ಶಿಕ್ಷಕರ ದಿನದ ಶುಭಾಶಯಗಳು.

ಈ ಸಂದರ್ಭದಲ್ಲಿ ನನಗೆ ರಾಜಕೀಯದ ಪಾಠ ಕಲಿಸಿದ ನನ್ನ ಗುರುಗಳಾದ ಎ.ಜಿ. ರಾಮಚಂದ್ರ  ರಾಯರನ್ನು ಸಹ ಮತ್ತೊಮ್ಮೆ ನೆನಪಿಸಿಕೊಳ್ಳುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಶಿಕ್ಷಕ ವೃತ್ತಿ ಎಂಬುದು ಅತ್ಯಂತ ಕಠಿಣ ಮತ್ತು ಜವಾಬ್ದಾರಿಯುತವಾದುದು. ಎಲ್ಲರ ಬದುಕು ಸಮರ್ಥವಾಗಿ ರೂಪುಗೊಳ್ಳುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಭಾರತದಲ್ಲಿ ಸೆಪ್ಟೆಂಬರ್ 5ನ್ನು ಪ್ರತಿವರ್ಷ ಶಿಕ್ಷಕರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ  ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಇದು ನಮ್ಮ ಬದುಕನ್ನು ರೂಪಿಸಿದ ಶಿಕ್ಷಕರಿಗೆ ಧನ್ಯವಾದ, ಕೃತಜ್ಞತೆ ಸಲ್ಲಿಸಲು ಇರುವ ಅತ್ಯಂತ ಮಹತ್ವದ ದಿನವೂ ಹೌದು, ಹೀಗಾಗಿ, ಈ ಶುಭ ದಿನದಂದು ನಮಗೆ ಜೀವನವನ್ನು ರೂಪಿಸಿಕೊಳ್ಳಲು ಕಲಿಸಿದ ಎಲ್ಲಾ ಶಿಕ್ಷಕರಿಗೆ ,  ಶಿಕ್ಷಕರ ದಿನದ ಶುಭಾಶಯಗಳು ಎಂದು  ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್